
ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ಆಳಂದ ಕೈ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ನಿನ್ನೆ ಸಂಜೆ ಸಿಎಂ ಕಚೇರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಬಂದಿದೆ.


ಈ ಹಿಂದೆ ಅನುದಾನ ವಿಚಾರದಲ್ಲಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದೀಗ ಬಿಆರ್ ಪಾಟೀಲ್ ಮತ್ತೆ ಏಕಾಏಕಿ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಸಾಕಷ್ಟು ಪ್ರಶ್ನೆಗಳನ್ನ ಹುಟ್ಟು ಹಾಕಿದೆ. ಬಿಆರ್ ಪಾಟೀಲ್ ಸಚಿವ ಸ್ಥಾನ ಸಿಗದೇ ಇರುವ ಕಾರಣಕ್ಕಾಗಿ ಹೆಚ್ಚಿನ ಅನುದಾನ ನಿರೀಕ್ಷೆ ಮಾಡಿದ್ದರು, ಆದ್ರೆ ವಿಶೇಷ ಯೋಜನೆಯಡಿ ಅನುದಾನ ನೀಡದೆ ಇರೋದಕ್ಕೆ ಬೇಸರಗೊಂಡಿದ್ದರು.
ಈ ಬಾರಿ ರಾಜೀನಾಮೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈಗ ರಾಜೀನಾಮೆ ಮೂಲಕ ಒತ್ತಡ ಹಾಕಿ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನಿರೀಕ್ಷಿಸುತ್ತಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ದೇ ಹಾಲಿ ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಈ ಹುದ್ದೆಗೆ ಯಾವುದೇ ಮಹತ್ವ ಕೂಡ ಇಲ್ಲ, ಸಲಹೆಗಾರ ಹುದ್ದೆಯಲ್ಲಿ ಕೇವಲ ನಾಮಕಾವಸ್ಥೆಗಷ್ಟೇ ಸಾಕಷ್ಟು ಅನುಭವ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಆರ್ ಪಾಟೀಲ್ ಸಲಹೆಗಳನ್ನ ತೆಗೆದುಕೊಳ್ಳುವ ವ್ಯಕ್ತಿತ್ವವು ಅಲ್ಲ ಅಲ್ದೇ ಸ್ಥಳೀಯವಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೂ ಮುನಿಸು ಇತ್ತು ಎನ್ನಲಾಗಿದೆ.

ಹೀಗಾಗಿ ಈ ಎಲ್ಲಾ ಕಾರಣಗಳಿಂದ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮೀಟಿಂಗ್ ಪಾಲಿಟಿಕ್ಸ್ ನಡುಗೆ ಕಾಂಗ್ರೆಸ್ ಗೆ ಬಿ ಆರ್ ಪಾಟೀಲ್ ರಾಜೀನಾಮೆ ಹೊಸ ತಲೆನೋವು ಶುರುವಾಗಿದೆ.


