ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

0 0
Read Time:1 Minute, 24 Second

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಿದೆ.

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದಂತಾಗಿದೆ.ಈ ಹಿಂದೆ ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು ವಿಸ್ತರಣೆ ಮಾಡಿದೆ. ಈ ಮೂಲಕ 8 ತಿಂಗಳ ಕಾಲ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ.ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. ಇದರಲ್ಲಿ 58 ಲಕ್ಷ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿವೆ. ಹೀಗಾಗಿ ಇನ್ನುಳಿದ ವಾಹನ ಸವಾರರು ತಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೇ ಇರುವುದು ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *