
Read Time:58 Second
ಧರ್ಮಸ್ಥಳ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ನಡೆದಿದೆ.


ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ಬಸ್ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ.