
Read Time:58 Second
ಉಡುಪಿ: ಕರಾವಳಿ ಬೈಪಾಸ್ ನಲ್ಲಿ ಖಾಸಗಿ ಬಸ್ಸೊoದರ ಸ್ಟೇರಿಂಗ್ ಕಟ್ಟಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.



ಉಡುಪಿ ಕಡೆಯಿಂದ ಬ್ರಹ್ಮಾವರ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ಸಿನ ಸ್ಟೇರಿಂಗ್ ಕಟ್ಟಾಗಿದ್ದರಿಂದ ಕೆಲಹೊತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಸ್ಥಳೀಯರಿಗೆ ಆತಂಕ ಉಂಟಾಯಿತು. ಇದರ ಪರಿಣಾಮವಾಗಿ ಕೆಲಕಾಲ ಕರಾವಳಿ ಬೈಪಾಸ್ ಬಳಿ ಟ್ರಾಫಿಕ್ ಸಮಸ್ಯೆ ಎದುರಾಯಿತು.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಸ್ಥಳೀಯರ ಸಹಕಾರದೊಂದಿಗೆ ಬಸ್ಸನ್ನು ನಿಯಂತ್ರಣಕ್ಕೆ ತರಲಾಯಿತು. ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಿದರು.



