ಮಂಗಳೂರಿನಲ್ಲಿ ಪಾಕಿಸ್ಥಾನದ ಮೂವರು ವಿವಾಹಿತ ಮಹಿಳೆಯರು

0 0
Read Time:1 Minute, 7 Second

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ.

ಈ ಪೈಕಿ ಒಬ್ಬರು ನಗರದ ಫಳ್ನೀರ್, ಇನ್ನೊಬ್ಬರು ವಾಮಂಜೂರಿನಲ್ಲಿ ನೆಲೆಸಿದ್ದಾರೆ. ಇನ್ನೊಬ್ಬ ಮಹಿಳೆಯ ವಾಸಸ್ಥಳದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರಕಾರಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸದ್ಯ ಯಾವುದೇ ಪಾಕಿಸ್ಥಾನಿ ನಾಗರಿಕರು ಪತ್ತೆಯಾಗಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *