
Read Time:1 Minute, 7 Second
ಮಂಗಳೂರು: ನಗರ ಹೊರವಲಯದ ಕುಡುಪು ಎಂಬಲ್ಲಿ ಎ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.


ಕೇರಳ ಮೂಲದ ಅಶ್ರಫ್ ಎಂಬವರನ್ನು 30 ಮಂದಿಯ ಗುಂಪು ಥಳಿಸಿ ಹತ್ಯೆಗೈದಿದ್ದರು. ಪ್ರಕರಣ ಬೆಳಕಿಗೆ ಬಂದರೂ ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆಕ್ಷೇಪ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು 20 ಮಂದಿ ಆರೋಪಿಗಳನ್ನು ಬಂಧಿಸಿದ್ದರು.
ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್ಕಾನ್ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್ ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿದೆ.


