ಮಂಗಳೂರು ಹೈ ಅಲರ್ಟ್: ರಾತ್ರಿ 9.30ರ ಒಳಗೆ ಅಂಗಡಿ, ಹೋಟೆಲ್, ಬಾರ್ ಎಲ್ಲವೂ ಬಂದ್​

0 0
Read Time:1 Minute, 48 Second

ಮಂಗಳೂರು: ಕರಾವಳಿಯಲ್ಲಿ, ವಿಶೇಷವಾಗಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಪ್ರಕಟಿಸಿರುವ ಕಾರಣ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ.

ಹೋಟೆಲ್, ಪಬ್, ಬಾರ್​ಗಳು, ಫುಟ್​ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗುತ್ತಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವು ದಿನಗಳ ಕಾಲ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್​ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ ಮಾಡಿತ್ತು. ಇದೀಗ ಕಾವೂರು ಪೊಲೀಸರು ಲೋಕೇಶ್​​ನನ್ನು ಬಂಧಿಸಿದ್ದಾರೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *