
Read Time:1 Minute, 18 Second
ನವದೆಹಲಿ: ದೇಶಾದ್ಯಂತ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.


ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಗೆಜೆಟ್ ಅಧಿಸೂಚನೆಯ ಪ್ರಕಾರ, ಈ ಯೋಜನೆಯಡಿ ((ರಸ್ತೆ ಅಪಘಾತ ಸಂತ್ರಸ್ತರ ನಗದುರಹಿತ ಚಿಕಿತ್ಸೆ ಯೋಜನೆ, 2025), ಅಂತಹ ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಸಂತ್ರಸ್ತರು ನಗದುರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಅಂತ ತಿಳಿದು ಬಂದಿದೆ.
“ಯಾವುದೇ ರಸ್ತೆಯಲ್ಲಿ ಸಂಭವಿಸುವ ಮೋಟಾರು ವಾಹನದ ಬಳಕೆಯಿಂದ ಉಂಟಾಗುವ ರಸ್ತೆ ಅಪಘಾತಕ್ಕೆ ಬಲಿಯಾದ ಯಾವುದೇ ವ್ಯಕ್ತಿಯು ಈ ಯೋಜನೆಯ ನಿಬಂಧನೆಗಳಿಗೆ ಅನುಗುಣವಾಗಿ ನಗದುರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಯೋಜನೆ ಮೇ 5, 2025 ರಿಂದ ಜಾರಿಗೆ ಬಂದಿದೆ.

