
Read Time:52 Second
ನವದೆಹಲಿ: ಟೆಕ್ ದಿಗ್ಗಜ ಮೈಕ್ರೋಸಾಫ್ಟ್ 6,000 ಉದ್ಯೋಗಿಗಳನ್ನು ವಜಾಗೊಳಿಸಿದೆ.


ವಜಾಗೊಳಿಸುವಿಕೆಯು ಎಲ್ಲಾ ಹಂತಗಳು ಮತ್ತು ಭೌಗೋಳಿಕ ಪ್ರದೇಶಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಆದರೆ ನಿರ್ವಹಣಾ ಮಟ್ಟವನ್ನು ಕಡಿಮೆ ಮಾಡುವತ್ತ ಗಮನಹರಿಸುತ್ತದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಮಂಗಳವಾರ ಸೂಚನೆಗಳನ್ನು ಹೊರಡಿಸಲಾಗಿದೆ. ಮೈಕ್ರೋಸಾಫ್ಟ್ ಎರಡು ವಾರಗಳ ಹಿಂದೆ ಜನವರಿಯಿಂದ ಮಾರ್ಚ್ ಅವಧಿಯ ದೃಢವಾದ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿತು. ಇದು ತನ್ನ ಕೌಡ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆ ವ್ಯವಹಾರಗಳಲ್ಲಿ ಬಲವಾದ ಕಾರ್ಯಕ್ಷಮತೆಯಿಂದ ಪ್ರೇರಿತವಾಗಿದೆ.