
Read Time:1 Minute, 20 Second
ಬಂಟ್ವಾಳ, ಜೂ. 09 : ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ.


ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್ಐಎ ತನಿಖೆಯಲ್ಲಿ ನ್ಯಾಯ ಸಿಗಲಿದೆ ಅಂತ ಎನ್ಐಎಗೆ ಕೊಡಲು ಹೋರಾಟ ಮಾಡಿದ್ದೆವು. ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಹಿಂದೂ ಸಂಘಟನೆಗಳು, ಮಾತ್ರವಲ್ಲದೆ ನಮ್ಮ ಗ್ರಾಮದ ಬಿಜೆಪಿನಾಯಕರೂ ನಮಗೆ ಸಹಕಾರ ನೀಡಿದ್ದರು. ಬೆಂಗಳೂರಿಗೆ ಹೋಗಿ ರಾಜ್ಯಪಾಲರಿಗೂ ಮನವಿ ಸಲ್ಲಿಸಿದ್ದೇವೆ, ಕೇಂದ್ರ ಸರ್ಕಾರ ನಮ್ಮ ನಿರೀಕ್ಷೆಯನ್ನು ನಿಜ ಮಾಡಿದೆ. ಇದಕ್ಕಾಗಿ ನಾವು ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇವೆ ಎಂದರು.

