ಉಡುಪಿ: ವಿದ್ಯೋದಯ ಪಬ್ಲಿಕ್ ಶಾಲೆಗೆ ಬೆದರಿಕೆ

0 0
Read Time:1 Minute, 29 Second

ಉಡುಪಿ: ನಗರದ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಸೋಮವಾರ ಇ-ಮೇಲ್ ಮೂಲಕ ಬಾಂಬ್ ಸ್ಪೋಟದ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಾಲೆಗೆ ಆಗಮಿಸಿದ ಪೊಲೀಸರು ಬಿಗು ತಪಾಸಣೆ ನಡೆಸಿದ್ದಾರೆ.

ಶ್ವಾನದಳದೊಂದಿಗೆ ಆಗಮಿಸಿದ ಪೊಲೀಸರು, ಶಾಲಾ ಆವರಣದಲ್ಲಿ ತೀವ್ರ ತಪಾಸಣೆ ನಡೆಸಿದರು. ಸದ್ಯ ಯಾವುದೇ ಬಾಂಬ್ ಅಥವಾ ಅಪಾಯಕಾರಿ ಅಂಶ ಪತ್ತೆಯಾಗಿಲ್ಲ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ವಿದ್ಯೋದಯ ಪಬ್ಲಿಕ್ ಸ್ಕೂಲ್, ಉಡುಪಿ ಶಾಲೆಯಲ್ಲಿ ಬಾಂಬ್ ಇಟ್ಟಿರೋ ಬಗ್ಗೆ ಇ-ಮೇಲ್ ಸ್ವೀಕೃತವಾಗಿರುತ್ತದೆ. ಈ ಬಗ್ಗೆ ಉಡುಪಿ ನಗರ ಪೊಲೀಸರು ಇಡಿ ಶಾಲೆಯನ್ನು ಸುಪರ್ದಿಗೆ ಪಡೆದು Anti Sabotage Team, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲಿಸಲಾಗಿದ್ದು, ಯಾವುದೇ ರೀತಿಯ ಸ್ಪೋಟಕ ವಸ್ತುಗಳು ಕಂಡುಬಂದಿರುವುದಿಲ್ಲ. ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿರುವುದರಿಂದ, ಇಡಿ ಶಾಲೆಯನ್ನು ಪರಿಶೀಲಿಸಿ, ಆಡಳಿತ ಮಂಡಳಿಗೆ ಬಿಟ್ಟುಕೊಡಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *