
Read Time:45 Second
ಪುತ್ತೂರು: ಯುವಕ ಮತ್ತು ಯುವತಿ ವಿಷ ಸೇವಿಸಿ ಒದ್ದಾಡುತ್ತಿದ್ದ ವೇಳೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆತಂದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.


ಯುವಕ ಮತ್ತು ಯುವತಿ ಮೂಲತಃ ಯಲಹಂಕದವರಾಗಿದ್ದು ಶ್ರೀಶಾ ಮತ್ತು ಪ್ರಜ್ವಲ ಎಂದು ಗುರುತಿಸಲಾಗಿದೆ. ನೆಲ್ಯಾಡಿ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.