
Read Time:1 Minute, 2 Second
ಬಂಟ್ವಾಳ ; ಕೊಲೆಯತ್ನ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕಿನ ಮೂಡ ಗ್ರಾಮದ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ರಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ . ಈತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿನಾಂಕ:30-06-2025 ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.