
Read Time:1 Minute, 3 Second
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮಂಗಳೂರು ಜೆಪ್ಪು ಮಾರ್ಕೆಟ್ ಬಳಿಯ ನಿವಾಸಿ ಮುಸಬ್ಬ ರವರ ಮಗ ಮೊಹಮ್ಮದ್ ಸಮೀರ್ ಬಂಧಿತ ಆರೋಪಿ.
ಮಲ್ಪೆ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ : 124/2011 ಕಲಂ:379 IPCಯ ಕಳ್ಳತನ ಪ್ರಕರಣದಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಸಮೀರ್ ನನ್ನು ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನೀಲ್ ಕುಮಾರ ಸಿಬ್ಬಂದಿಯವರಾದ ಸುರೇಶ್, ವಿಶ್ವನಾಥ, ಕುಬೇರ ರವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಆಗಸ್ಟ್ 17 ರಂದು ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.

