
ಮಂಗಳೂರು: ಉಪ್ಪಿನಂಗಡಿ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಸರಗಳ್ಳತನದ ಆರೋಪಿಯೊಬ್ಬನನ್ನು ಬಂಧಿಸಿ ರೂ 5,05,000 ಮೌಲ್ಯದ ಸೊತ್ತು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.


ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4 ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪುತ್ತೂರಿನ ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.