
Read Time:1 Minute, 10 Second
ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸರ್ಕಾರದ ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳಲ್ಲಿ ಪಿಎಂ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವಂತ ಮಸೂದೆ ಸೇರಿಯೂ ಸೇರಿದೆ.


ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ, 2025, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದಂತ ಪಿಎಂ, ಸಿಎಂ, ಸಚಿವರ ವಿರುದ್ಧದ ಪದಚ್ಯುತಿಗೊಳಿಸುವಂತ ಮಸೂದೆಗೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಲೋಕಸಭೆಯಲ್ಲಿ ಗದ್ದಲ, ಕೋಲಾಹಲ ಕೂಡ ಉಂಟಾಯಿತು. ಹೀಗಾಗಿ ಲೋಕಸಭೆಯ ಸದನವನ್ನು ಸ್ಪೀಕರ್ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.

