
Read Time:1 Minute, 0 Second
ಮಂಗಳೂರು:ಕಾರೊಂದು ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಹೊಂಡಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಮಂಗಳೂರಿನ ನೀರುಮಾರ್ಗ ಸಮೀಪದ ಮಾಣೂರು ಬಳಿ ನಡೆದಿದೆ.


ಕಿಶೋರ್ ಮೃತಪಟ್ಟ ಚಾಲಕ. ಅಡ್ಕಾರ್ ಕಟ್ಟೆಯಿಂದ ನೀರುಮಾರ್ಗ ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಮಾಣೂರು ದೇಗುಲದ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ರಿಕ್ಷಾ ಹೊಂಡಕ್ಕೆ ಬಿದ್ದಿದೆ. ಗಂಭೀರ ಗಾಯಗೊಂಡ ಚಾಲಕ ಕಿಶೋರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿದ್ದಾರೆ.


ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
