
Read Time:55 Second
ಉಡುಪಿ : ಹಿರಿಯಡ್ಕ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಪರ್ಕಳ ಕೆನರಾ ಬ್ಯಾಂಕ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟಿಟಿ ವಾಹನಕ್ಕೆ ಡಿಕ್ಕಿಯಾದ ಘಟನೆ ನಡೆದಿದ್ದು, ಟಿಟಿ ವಾಹನದಲ್ಲಿ ತೆಲಂಗಾಣ ಮೂಲದ ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದರು.ಅವರು ಉಡುಪಿಯಿಂದ ಧರ್ಮಸ್ಥಳದ ಕಡೆಗೆ ಸಂಚರಿಸುತ್ತಿದ್ದರು ಎನ್ನಲಾಗಿದೆ.



ಪರ್ಕಳ ಪರಿಸರದಲ್ಲಿ ಬೆಳಗ್ಗಿನ ಜಾವ ಮಂಜು ಕವಿದ ವಾತಾವರಣವಿದ್ದು, ತಿರುವು ಗೋಚರಿಸದ ಕಾರಣ ಕಾರು ಬಲಬದಿಗೆ ಸಾಗಿ ಎದುರಿನಿಂದ ಬರುತ್ತಿದ್ದ ಟಿಟಿಗೆ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕ ಗಾಯಗೊಂಡಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

