
ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿಯ ನಿವಾಸಿ ಅಭಿಷೇಕ್ ಆಚಾರ್ಯ (23), ಗುರುವಾರ ಬೆಮ್ಮಣ್‌ನ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಾಥಮಿಕ ತನಿಖೆಯ ಪ್ರಕಾರ, ಅಭಿಷೇಕ್ ಪ್ರೇಮ ವೈಫಲ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್‌ತಿಳಿಸಿದ್ದಾರೆ.
ಕುಟುಂಬದವರ ಪ್ರಕಾರ ಆತ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಅಭಿಷೇಕ್ ಬರೆದ ಡೆತ್‌ನೋಟ್‌ನಲ್ಲಿ ನಾಲ್ವರು ಗೆಳೆಯರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಉಲ್ಲೇಖಿಸಿದ್ದು, ಅವರ ಮೊಬೈಲ್‌ಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆದರೆ ಆ ಯುವತಿ ವೀಡಿಯೊ ಹಂಚಿಕೊಂಡದ್ದು ಅಥವಾ ಬ್ಲ್ಯಾಕ್ ಮೇಲ್ ನಲ್ಲಿ ಭಾಗಿಯಾಗಿದ್ದಾಳೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿಲ್ಲ. ತನಿಖೆಯ ಭಾಗವಾಗಿ ಆಕೆಯ ಮೊಬೈಲ್‌ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಹರಿರಾಮ್ ಶಂಕರ್‌ಮಾಹಿತಿ ನೀಡಿದ್ದಾರೆ.
