
Read Time:54 Second
ಕೇರಳ ಮೂಲದ ನರ್ಸ್ ನಿಮಿಷಾ ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದು, ಇದೀಗ ಈಕೆಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯೆಮೆನ್ ಗಲ್ಲು ಶಿಕ್ಷೆ ರದ್ದುಗೊಳಿಸಿದೆ.


ಕ್ರಿಶ್ಚಿಯನ್ ಧರ್ಮಪ್ರಚಾರಕ ಕೆ.ಎ.ಪಾಲ್ ಯೆಮೆನ್‌ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ವಿಡಿಯೋ ಸಂದೇಶದ ಮೂಲಕ ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಡಿಯೋ ಸಂದೇಶದಲ್ಲಿ ಯೆಮೆನ್ ನಾಯಕರಿಗೆ ಧನ್ಯವಾದ ಅರ್ಪಿಸಿದರು ಮತ್ತು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ಕೆ.ಎ.ಪಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಧನ್ಯವಾದ ಹೇಳಿದ್ದಾರೆ.