
Read Time:1 Minute, 16 Second
ಮಂಗಳೂರು: ಕಾಂಗ್ರೆಸ್ ಸರಕಾರದಿಂದ ಪೊಲೀಸರನ್ನು ಬಳಸಿಕೊಂಡು ಹಿಂದೂ ಕಾರ್ಯಕರ್ತರನ್ನ ಹೆದರಿಸುವ ಪ್ರಯತ್ನ ರಾಜ್ಯದಲ್ಲಿ ಆರಂಭವಾಗಿದ್ದು ಹಿಂದೂಗಳಿಗೆ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಪೊಲೀಸ್ ಅಧಿಕಾರಿಯಿಂದಲೂ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ಇತ್ಯರ್ಥವಾಗುವ ಹೊತ್ತಲ್ಲಿ ಪೊಲೀಸ್ ಅಧಿಕಾರಿ ನೇರವಾಗಿ ಹಿಂದೂ ಕಾರ್ಯಕರ್ತನ ಮೇಲೆ ಕೈ ಮಾಡಿದ್ದಾರೆ. ಪೊಲೀಸ್ ಠಾಣೆಯ ಒಳಗಡೆ ಕೂಡ ಯಾರಿಗೂ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದ್ದು ಇದರ ಹಿಂದೆ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ಕರ್ತವ್ಯ ಮಾಡಬೇಕೇ ಹೊರತು ಸರ್ಕಾರದ ಕೈಗೊಂಬೆಯಾಗಿರಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

