
Read Time:1 Minute, 6 Second
ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ. ಅಂಜಲಿ ಸಾವಿನಿಂದ ಕುಗ್ಗಿರುವ ಸಹೋದರಿ ಯಶೋಧಾ ಅಂಬಿಗೇರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ತಂಗಿ ಯಶೋಧಾ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವೀರಾಪುರ ಓಣಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು,ಕಿಮ್ಸ್ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದಾರೆ. ಯಶೋಧಾ ಪ್ರಾಣಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ನಿನ್ನೆ, ಪ್ರತಿಭಟನೆ ವೇಳೆಯೂ ಪ್ರಜ್ಞೆ ತಪ್ಪಿ ಬಿದ್ದಿದ್ದ ಸಹೋದರಿ ಮನೆಗೆ ಹೋದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

