
Read Time:57 Second
ಉಡುಪಿ ಜಿಲ್ಲೆಯಲ್ಲಿ ಮತ್ತೆ ಓರ್ವ ಅಕ್ರಮ ಬಾಂಗ್ಲಾ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಎರಡು ದಿನಗಳ ಬಳಿಕ ಕಾರ್ಕಳದಲ್ಲಿ ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ವ್ಯಕ್ತಿಯನ್ನು ಮಹಮ್ಮದ್ ಜಹಾಂಗೀರ್ ಆಲಂ ( 24) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಉಡುಪಿ ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

