
Read Time:1 Minute, 8 Second
ಮಂಗಳೂರು : ಆನ್‌ಲೈನ್ ವಂಚನೆಯ ಮೂಲಕ ಬಡ ಜನರ ಬ್ಯಾಂಕ್ ಖಾತೆಗಳನ್ನು ದುರುಪಯೋಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.


ಬೆಳಗಾವಿಯ ತಹಸೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28), ರಾಮದೇವ ಗಲ್ಲಿಯ ಅನೂಪ್ ಕಾರೇಕರ್ (42) ಬಂಧಿತ ಆರೋಪಿಗಳು.
ದಕ್ಷಿಣ ಕನ್ನಡ ಸೈಬರ್ ಕ್ರೈಂ ಪ್ರಕರಣದ ತನಿಖೆ ವೇಳೆ ಆರೋಪಿಗಳ ಪ್ಲಾನ್ ತಿಳಿದು ಬಂದಿದೆ. ಮುಗ್ಧ ಜನರ ಬ್ಯಾಂಕ್ ಖಾತೆಯೇ ಇವರ ಗುರಿಯಾಗಿತ್ತು. ಆರೋಪಿಗಳು ಅಮಾಯಕರಿಗೆ ಚಿಲ್ಲರೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯಲು ಹೇಳುತ್ತಾರೆ. ಬಳಿಕ, ಆರೋಪಿಗಳು ಆ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಪಡೆದುಕೊಂಡು, ಆನ್ ಲೈನ್ ಬ್ಯುಸಿನೆಸ್ ಮಾಡುವುದಾಗಿ ಹೇಳುತ್ತಿದ್ದರು. ಬಳಿಕ ಮುಗ್ಧರ ಬ್ಯಾಂಕ್ ಖಾತೆ ಮಾಹಿತಿಯನ್ನು ಸೈಬರ್ ವಂಚಕರ ಕೈಗಿಡುತ್ತಿದ್ದರು.

