ಇನ್ಮುಂದೆ ಚಿಕನ್ ಕಬಾಬ್/ ಫಿಶ್ ಖಾದ್ಯ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸಿದ್ರೆ 7 ವರ್ಷ ಜೈಲುಶಿಕ್ಷೆ, 10 ಲಕ್ಷ ದಂಡ

0 0
Read Time:1 Minute, 10 Second

ಬೆಂಗಳೂರು : ಖಾದ್ಯ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

7 ವರ್ಷ ಜೈಲುಶಿಕ್ಷೆ, 10 ಲಕ್ಷ ದಂಡ..!

ನಿಷೇಧದ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಅನ್ವಯ 7 ವರ್ಷಗಳಿಂದ ಜೀವಾವಧಿ ವರೆಗೆ ಜೈಲುಶಿಕ್ಷೆ ಹಾಗು 10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ರಾಜ್ಯದ ಎಲ್ಲಾ ಕಬಾಬ್ ತಯಾರಿಸುವ ಮತ್ತು ಮಾರಾಟ ಮಾಡುವ ಆಹಾರ ಉದ್ದಿಮೆದಾರರು ಈ ಆದೇಶವನ್ನು ತಕ್ಷಣದಿಂದಲೇ ಪಾಲಿಸಲು ಸೂಚಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *