
Read Time:1 Minute, 10 Second
ಬ್ರಹ್ಮಾವರದ ಅಕ್ಷತಾ ಪೂಜಾರಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಠಾಣೆ ಎದುರು ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಲ್ಲವ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಪೂಜಾರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಸೇರಿದಂತೆ ಹಲವರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.



ಬ್ರಹ್ಮಾವರ ಪಿಎಸ್‌ಐ ಅಶೋಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬ್ರಹ್ಮಾವರದ ಅಕ್ಷತಾ ಪೂಜಾರಿ ಮನೆಗೆ ಪೊಲೀಸರು ಅಕ್ರಮವಾಗಿ ಪ್ರವೇಶಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯಲ್ಲಿ ಧ್ವನಿವರ್ಧಕ ಬಳಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆಯದೇ ಕಾನುನು ಉಲ್ಲಂಘಿಸಲಾಗಿದೆ ಎಂದು ಪ್ರಕರಣದಲ್ಲಿ ದೂರಲಾಗಿದೆ.

