admin

ಹೃದಯಘಾತದಿಂದ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಶ್ರೀ ವಿಧಿವಶ

ರಾಯಚೂರಿನ ತಿಂಥಣಿಯ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮಾನಂದ ಶ್ರೀ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬಳಿ ಇರುವ ಮಠದಲ್ಲಿ ಸಿದ್ದರಾಮಾನಂದ ಶ್ರೀಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 3:40ರ ಸುಮಾರಿಗೆ ಸ್ವಾಮೀಜಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿತರಿಳೆದಿದ್ದಾರೆ. ಜನವರಿ 12, 13 ಮತ್ತು 14 ರಂದು ಹಾಲುಮತದ ಉತ್ಸವ ನಡೆಸಿಕೊಟ್ಟಿದ್ದರು.2023-24 ರಲ್ಲಿ ಇದೆ ಮಠದ ಉತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು.

Read More

Update ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..!!

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಪ್ರದೇಶದಿಂದ ಮುಂಜಾನೆ 4 ಗಂಟೆ ಸುಮಾರಿಗೆ ನಾಪತ್ತೆಯಾದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.  ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ.  ಸುಮಂತ್ ಸೇರಿದಂತೆ ಮೂವರು ಬಾಲಕರು ಪ್ರತಿದಿನ ಮುಂಜಾನೆ 4 ಗಂಟೆ ಸುಮಾರಿಗೆ ಬೆಳ್ತಂಗಡಿ ಕಳಿಯ ಗ್ರಾಮದ ನಾಳ ದೇವಸ್ಥಾನದಲ್ಲಿ ನಡೆಯುವ…

Read More

“ಸುವರ್ಣ ಸಂಕ್ರಾಂತಿ ಸಂಭ್ರಮ” ದಲ್ಲಿ ಸುವರ್ಣ ತಾರೆಯರ ಸಮಾಗಮ…ಇದೇ ಶುಕ್ರವಾರ ಸಂಜೆ 6.30 ರಿಂದ 9.30 ರವರೆಗೆ…!

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಹುರಿಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆತ್ಮೀಯರೊಂದಿಗೆ ಹಂಚಿ ಸಂತೋಷವನ್ನು ಪಡುತ್ತಾರೆ. .ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು “ಸುವರ್ಣ ಸಂಕ್ರಾಂತಿ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸ್ಟಾರ್ ಸುವರ್ಣ ಪರಿವಾರದ ಎಲ್ಲಾ…

Read More

ಬೆಳ್ತಂಗಡಿ: ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ..!!

ಬೆಳ್ತಂಗಡಿ: ಬೆಳಗ್ಗೆ ಧನು ಪೂಜೆಗೆಂದು ಹೋದ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಒಡಿಲ್ನಾಳ ಗ್ರಾಮದ ಸಂಭೋಳ್ಯದಲ್ಲಿ ನಡೆದಿದೆ. ಸುಮಂತ್ (16) ಎಂಬವನೇ ನಾಪತ್ತೆಯಾದ ವಿದ್ಯಾರ್ಥಿ. ಪ್ರತಿದಿನವೂ ಗೆಳೆಯರ ಜೊತೆಗೆ ಹೋಗುತ್ತಿದ್ದ ಬಾಲಕ ಇಂದು ಬಂದಿಲ್ಲ ಎನ್ನುವ ಮಾಹಿತಿ ಸ್ನೇಹಿತರಿಂದ ದೊರೆತಿದ್ದು, ಈ ವೇಳೆ ನಾಪತ್ತೆಯಾಗಿರುವ ವಿಚಾರ ತಿಳಿದಿದೆ. ತೋಟದ ಬದಿಯ ಪ್ರದೇಶದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು, ಚಿರತೆಗಳು ಓಡಾಡುತ್ತಿವೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಬಾಲಕ ನಾಪತ್ತೆಗೆ ಸಂಬಂಧಿಸಿದ ಹಾಗೆ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ…

Read More

ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಜೈಲು ಶಿಕ್ಷೆ..!! ನ್ಯಾಯಾಲಯ ಆದೇಶ

ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್‌ ವ್ಯಾಜ್ಯದಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್‌ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ. 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ…

Read More

ಪತಿ ಸಾವಿನ ವೇಳೆ ಮಗು ಜನನ- ಶಿಶು ಜತೆ ಸ್ಟ್ರೆಚರ್‌ನಲ್ಲಿ ಬಂದು ಅಂತಿಮ ದರ್ಶನ ಪಡೆದ ಯೋಧನ ಪತ್ನಿ!

ಮಹಾರಾಷ್ಟ್ರ : ಆತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಪತ್ನಿ ಗರ್ಭಿಣಿಯಾಗಿದ್ದ ಕಾರಣ ಪಿತೃತ್ವ ರಜೆ ಪಡೆದು ಹುಟ್ಟೂರಿಗೆ ಬಂದಿದ್ರು. ಅತ್ತ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಆಗಮನಕ್ಕಾಗಿ ಯೋಧನ ಕುಟುಂಬ ಕಾಯುತ್ತಿತ್ತು. ಆದ್ರೆ, ವಿಧಿಯಾಟ ಬೇರೆಯೇ ಆಗಿತ್ತು. ಪತ್ನಿಗೆ ಬೇಕಾದ ಅಗತ್ಯ ವಸ್ತುಗಳನ್ನು ತರಲು ಬೈಕ್ ನಲ್ಲಿ ತೆರಳಿದ್ದ ಯೋಧ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ನಡೆದಿರೋದು ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ. 35 ವರ್ಷದ…

Read More

ಬಂಟ್ವಾಳ: ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನ ಡಿಕ್ಕಿ..!!

ಕಲ್ಲಡ್ಕ: ಗೂಡ್ಸ್ ವಾಹನವೊಂದು ನಿಲ್ಲಿಸಿದ್ದ ಟ್ಯಾಂಕರ್‌ಗೆ ಗುದ್ದಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹೊಟೇಲ್ ಸಮುದ್ರ ಬಳಿ ಈ ಘಟನೆ ನಡೆದಿದೆ. ಪರಿಣಾಮ ಗೂಡ್ಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರು ಮಂದಿ ಉಪನ್ಯಾಸಕರು ಕರ್ತವ್ಯದಿಂದ ವಜಾ

ಬೆಂಗಳೂರು: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ಆರು ಮಂದಿ ಉಪನ್ಯಾಸಕರನ್ನು ವಜಾ ಮಾಡಲಾಗಿದೆ. ಜ. 8 ರಂದು ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಸಾವಿಗೆ ಕಾಲೇಜಿನ ಉಪನ್ಯಾಸಕರೇ ಕಾರಣ ಎಂದು ಉಪನ್ಯಾಸಕರು ಮತ್ತು ಆಕೆಯ ಸಹಪಾಠಿಗಳು ಆರೋಪಿಸಿದ್ದರು. ಉಪನ್ಯಾಸಕರು ಮಾಡಿದ ಜನಾಂಗೀಯ ನಿಂದನೆ, ಕಿರುಕುಳದಿಂದ ‌ನೊಂದು, ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಈ ಹಿನ್ನೆಲೆ ಕಾಲೇಜಿನ ಪ್ರಾಂಶುಪಾಲರೂ ‌ಸೇರಿದಂತೆ ಒಟ್ಟು ಐವರು…

Read More

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಮಾಲಾಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ

ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು…

Read More

“ಜೈ ಬಾಂಗ್ಲಾ” ಘೋಷಣೆ ಕೂಗಿದ ಮಹಿಳೆ ಅರೆಸ್ಟ್.!

ಬೆಂಗಳೂರಿನಲ್ಲಿ ದೇಶ ವಿರೋಧಿ ಜೈ ಬಾಂಗ್ಲಾ ಘೋಷಣೆ ಕೂಗಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ದೇಶವಿರೋಧಿ ಘೋಷಣೆ ಕೂಗಿದ ಮಹಿಳೆಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಎಂಬ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಾಳೆ. ಘಟನೆ ಹಿನ್ನೆಲೆ ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಜೆಸಿಬಿ ಬಳಕಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ…

Read More