
ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ
ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ’- (ಬ್ಯಾಗ್ ರಹಿತ ದಿನ – No Bag Day) – ಕಾರ್ಯಕ್ರಮದ ವರದಿಯನ್ನು ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಶಾಲಾ ಬ್ಯಾಗ್ ಹೊರೆಯನ್ನು ತಗ್ಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಆಚರಿಸುವಂತೆ ಉಲ್ಲೇಖ-1 ರ ಪತ್ರದಲ್ಲಿ ಆದೇಶಿಸಲಾಗಿದೆ. ಅದರಂತೆ, ಪ್ರಸಕ್ತ ಸಾಲಿನಲ್ಲಿ ಕ್ರಮವಹಿಸಲು…