ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು
ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ. ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು…

