admin

ಕುಟುಂಬಕ್ಕೆ ಕಂಟಕವಾಗಿದ್ದ ಅಣ್ಣ; ಪೆಟ್ರೋಲ್ ಸುರಿದು ಕೊಂದ ತಮ್ಮ: ತಪ್ಪೊಪ್ಪಿಕೊಂಡ ಆರೋಪಿ!

ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಈತನ ಸಹೋದರ ನಿಂಗಪ್ಪ (21) ಕೃತ್ಯ ಎಸಗಿದ ಆರೋಪಿ. ಮೊದಲು ಕಡಬ ಪೊಲೀಸರ ವಶದಲ್ಲಿದ್ದ ಈತನನ್ನು ಜೂನ್ 8 ರಾತ್ರಿ ಮಂಗಳೂರು ವಿಭಾಗದ ರೈಲ್ವೇ…

Read More

ದ್ವಾರಕಾದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಹತ್ತಿ, ಮೂವರ ದಾರುಣ ಸಾವು

ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತ ದುರ್ದೈವಿಗಳು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ತಂದೆ ಯಾದವ್ ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್‌ಮೆಂಟ್‌ನ 9ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ. ಕೂಡಲೇ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಕ್ಕಳಿಬ್ಬರು…

Read More

ಕಂಟೈನರ್ ಹಡಗಿನಲ್ಲಿ ಅಗ್ನಿ ಅವಘಡ: ಭಾರತೀಯ ನೌಕಾಪಡೆಯಿಂದ ಜೀವ ರಕ್ಷಣೆ ಕಾರ್ಯ

ಮಂಗಳೂರು: ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹಾಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಇನ್ನುಳಿದ 18 ಮಂದಿಯನ್ನು ರಕ್ಷಿಸಿಸಲಾಗಿದ್ದು, ಅವರನ್ನು ಹೊತ್ತ ಭಾರತೀಯ ನೌಕಾಪಡೆಯ ಐಎನ್‌ಎಸ್ ಸೂರತ್ ಹಡಗು ಸೋಮವಾರ ರಾತ್ರಿ 10:45 ಕ್ಕೆ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ (ಎನ್‌ಎಂಪಿಎ) ಆಗಮಿಸಿದೆ. ಎಂ.ವಿ. ವಾನ್ ಹಾಯ್ 503 ಹಡಗು ಕೊಲೊಂಬೋದಿಂದ ಮುಂಬೈಯ ನ್ಹಾವಾ ಶೇವಾ ಕಂಟೈನರ್ ಟರ್ಮಿನಲ್‌ಗೆ ಪ್ರಯಾಣಿಸುತ್ತಿತ್ತು. ಆದರೆ ಜೂನ್ 9 ರಂದು ಕೇರಳದ ಬೇಪೂರ್ ಕರಾವಳಿಯಿಂದ…

Read More

ಸುಬ್ರಹ್ಮಣ್ಯದಲ್ಲಿ ಕೊಠಡಿ ವಿಚಾರಕ್ಕೆ ಯುವಕನಿಗೆ ಹಲ್ಲೆ

ಸುಬ್ರಹ್ಮಣ್ಯ: ಕೊಠಡಿ ಬಾಡಿಗೆಗೆ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಕೃತ್ಯದ ವೀಡಿಯೋ ವೈರಲ್‌ ಆಗಿದೆ. ಯುವಕನೋರ್ವ ಕೊಠಡಿಯನ್ನು ವೀಕ್ಷಿಸಿದ ಬಳಿಕ ಅದನ್ನು ಪಡೆಯದೇ ತೆರಳಿದ ಕಾರಣಕ್ಕೆ ಕೊಠಡಿಯನ್ನು ನಿರ್ವಹಿಸುವ ತಂಡ ವಾಗ್ವಾದಕ್ಕಿಳಿಯಿತು. ಬಳಿಕ ಯುವಕನ ಮೇಲೆ ತಂಡದ ಓರ್ವ ಸದಸ್ಯ ಹಲ್ಲೆ ನಡೆಸಿದನು. ಸುಬ್ರಹ್ಮಣ್ಯದಲ್ಲಿ ಕೆಲವೆಡೆ ಹೊರಗಿನವರು ರೂಂಗಳನ್ನು ಲೀಸ್‌ಗೆ ಪಡೆದುಕೊಂಡು ಯಾತ್ರಿಕರಿಗೆ ಪೂರೈಸುವ ಕೆಲಸ ಮಾಡುತ್ತಿದ್ದು ಅವರು ಈ ಕೃತ್ಯ ಎಸಗಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ….

Read More

ಇನ್ನಾ ಸರ್ಕಾರಿ ಶಾಲೆ ಹಳೆ ವಿದ್ಯಾರ್ಥಿ ಸಂಘಕ್ಕೆ ಕುಶ ಆರ್. ಮೂಲ್ಯ ಅಧ್ಯಕ್ಷರಾಗಿ ಆಯ್ಕೆ

ಕಾರ್ಕಳ : ಇನ್ನಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಕುಶ ಆರ್. ಮೂಲ್ಯ ಇನ್ನಾ ಆಯ್ಕೆಯಾಗಿದ್ದಾರೆ. ಜೂ. 8ರಂದು ಶಾಲೆಯಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಹರೀಶ್ ಶೆಟ್ಟಿ ದಡ್ಡು, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಪಡು, ಕೋಶಾಧಿಕಾರಿಯಾಗಿ ರಾಕೇಶ್, ಸದಸ್ಯರಾಗಿ ಭವಾನಿ, ಕಿರಣ್, ಸುರೇಶ ಮೂಲ್ಯ, ದೀಪಕ್ ಕೋಟ್ಯಾನ್, ಸಂತೋಷ್, ಚಂದ್ರಹಾಸ ಶೆಟ್ಟಿಗಾ‌ರ್, ಪ್ರಸಾದ್‌ ಕುಂದರ್, ಸುರೇಶ ಮೂಲ್ಯ, ರಾಜೀವಿ, ಹರಿಣಾಕ್ಷಿ, ಸುಶೀಲ…

Read More

ನೀರಿನ ಬಾಟಲ್‌ಗೂ ನಿಷೇಧ: ಆಗಸ್ಟ್ 15ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯಗಳು

ಬೆಂಗಳೂರು,ಜೂ. 09 : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಮುಕ್ತ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ತಿಳಿಸಿದರು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು,…

Read More

ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾಡಳಿತದ ದಿಟ್ಟ ಹೆಜ್ಜೆ – ಜನರಿಗೆ ಜಾಗೃತಿ ಕರೆ

ಮಂಗಳೂರು,ಜೂ. 09 :ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಮೇ ತಿಂಗಳೊಂದರಲ್ಲೇ 10 ದೃಢಪಡಿಸಿದ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಶಂಕಿತ ಪ್ರಕರಣಗಳು ಹರಡುವ ಲಕ್ಷಣಗಳನ್ನು ತೋರಿಸುತ್ತಿವೆ ಎಂದು ಡಾ. ತಿಮ್ಮಯ್ಯ ವರದಿ…

Read More

ಎನ್‌ಐಎ ತನಿಖೆಗೆ ಆದೇಶ: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಮಾಧಾನ

ಬಂಟ್ವಾಳ, ಜೂ. 09 : ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್‌ಐಎ…

Read More

ದಕ್ಷಿಣ ಕನ್ನಡದಲ್ಲಿ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಯತ್ನ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಸಮೀಪ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಹನುಮಪ್ಪ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಮೂಲದ ಅಣ್ಣ-ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಪ್ಯಾಸೆಂಜರ್ ರೈಲಿನಲ್ಲಿ ಆಗಮಿಸಿದ ಇವರು ಬಜಕರೆ ರೈಲು ನಿಲ್ದಾಣದಲ್ಲಿ ಇಳಿದಿದ್ದಾರೆ. ರೈಲು ಹೋದ ನಂತರ ಸುಮಾರು 500 ಮೀಟರ್ ದೂರದವರೆಗೂ ಅಣ್ಣನನ್ನು ಕರೆದುಕೊಂಡು ಹೋದ ತಮ್ಮ ನಿಂಗಪ್ಪ ಏಕಾಏಕಿ ಪೆಟ್ರೋಲ್…

Read More

ಬುದ್ಧನ ಧ್ಯಾನ ಶಿಲ್ಪ ಪತ್ತೆ: ಕದ್ರಿ ದೇವಾಲಯದ ಕೆರೆಯಲ್ಲಿ ಅಪರೂಪದ ಅನ್ವೇಷಣೆ

ಮಂಗಳೂರು: ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ ದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯ ಸಂದರ್ಭ ದಲ್ಲಿ ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ದೇವಾಲಯದ ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಿರುವ ಸ್ಥಿತಿಯಲ್ಲಿ ಕಂಡುಬಂದ ಈ ಶಿಲ್ಪವನ್ನು ಕದ್ರಿ ದೇವಾಲಯದ ಆಡಳಿತಾಧಿಕಾರಿಗಳ ಅನುಮತಿಯೊಂದಿಗೆ ಮೇಲೆ ತೆಗೆದು ಅಧ್ಯಯನ ಮಾಡಲಾಗಿದೆ ಎಂದು ಪ್ರೊ.ಮುರುಗೇಶಿ…

Read More