admin

ವೈರಲ್ ತಲ್ವಾರ್ ಫೋಟೋ ಸುಳ್ಳು ಎಂದು ದೃಢ – ತಪ್ಪು ಸುದ್ದಿ ಹರಡಿಸಿದವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು ಜೂನ್ 07: ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ಮೂಡಬಿದ್ರೆಗೆ ಹೋಗುತ್ತಿದ್ದಾಗ ಹಿಂಬದಿಯ ಸವಾರ ತನ್ನ ಕೈಯಲ್ಲಿ ಆಕ್ವೇರಿಯಂ ಕಲ್ಲು ಮತ್ತು ಇ-ಸಿಗರೇಟ್ ಹಿಡಿದುಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಬಜ್ಪೆ ಠಾಣೆಯಲ್ಲಿ ತಪ್ಪು ಮಾಹಿತಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ…

Read More

ಮಂಗಳೂರು: ಯೆಯ್ಯಾಡಿಯಲ್ಲಿ  ಯುವಕನಿಗೆ ಚೂರಿ ಇರಿತ, ಸ್ಥಿತಿ ಚಿಂತಾಜನಕ

ಮಂಗಳೂರು: ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಚೂರಿ ಇರಿದ ಆರೋಪಿಗಳು ಎಂದು ತಿಳಿದು ಬಂದಿದೆ. ಒಂದು ತಿಂಗಳ ಹಿಂದೆ ಕ್ಷುಲ್ಲಕ ವಿಚಾರಕ್ಕೆ ಇವರುಗಳ ಮಧ್ಯೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.ಬ್ರಿಜೇಶ್ ಶೆಟ್ಟಿ ಕೌಶಿಕ್ ಎಂಬಾತನಿಗೆ ಹೊಡೆದಿದ್ದ ಇದೇ ವೇಳೆ ಬ್ರಿಜೇಶ್ ಗೆ ಕೌಶಿಕ್ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಗಲಾಟೆಯ ದ್ವೇಷದ…

Read More

ಮಕ್ಕಳನ್ನು ಸುರಕ್ಷಿತವಾಗಿ ದಾಟಿಸುತ್ತಿದ್ದಾಗ ಬಸ್ ಡಿಕ್ಕಿ: ಯುವಕ ನಿಧನ

ಬಂಟ್ವಾಳ ಜೂನ್ 07: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಸಂಭವಿಸಿದೆ. ಮೃತರನ್ನು ಅಮೆಮ್ಮಾರ್ ನಿವಾಸಿ ಝಾಹಿದ್ (28) ಎಂದು ಗುರುತಿಸಲಾಗಿದೆ. ಅವರು ಶಾಲೆಗೆ ತೆರಳುವ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಆಗಮಿಸಿದ ಬಸ್ ಢಿಕ್ಕಿ ಹೊಡೆಯಿತು. ಘಟನೆಯಲ್ಲಿ ಝಾಹೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಆಟೋ…

Read More

ಅರುಣ್ ಪುತ್ತಿಲ ಗಡಿಪಾರು ಪ್ರಕರಣ:ನೋಟಿಸ್ ವಿಚಾರಣೆಯಲ್ಲಿ ಪೊಲೀಸರಿಗೆ ಹಿನ್ನಡೆ

ಪುತ್ತೂರು : ಇತ್ತಿಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬೆನ್ನಲ್ಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ ಮಾಡಿಕೊಂಡಿದ್ದ ಪೊಲೀಸರಿಗೆ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ನೋಟಿಸ್‌ ನೀಡಿ…

Read More

ಪತಿ ನಾಪತ್ತೆ: ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ತಮ್ಮ ಮನೆಯಿಂದ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ವಸಂತಿ ಎಂಬವರ ಪತಿ ಪ್ರಭಾಕರ(46ವರ್ಷ) ನಾಪತ್ತೆಯಾದವರು. ಪ್ರಭಾಕರ ಅವರು ಈ ಹಿಂದೆ ಸುಮಾರು 5-6 ಬಾರಿ ಮನೆಯಿಂದ ಕೆಲಸಕ್ಕೆಂದು ಹೋದವರು ಸುಮಾರು 2-3 ತಿಂಗಳವರೆಗೆ ಇದ್ದು ನಂತರ ಮನೆಗೆ ವಾಪಾಸಾಗುತ್ತಿದ್ದರು. ಆದರೆ 2023 ರ ಡಿಸೆಂಬರ್‌ನಲ್ಲಿ ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಹಿಂದೂ ಸಂಘಟನೆಗಳು ಟಾರ್ಗೆಟ್? ದ.ಕ. ಎಸ್‌ಪಿಗೆ ಸ್ಪಷ್ಟನೆ ಕೇಳಿದ ಪೊಲೀಸ್ ಪ್ರಾಧಿಕಾರ

ಮಂಗಳೂರು ಜೂನ್ 06: ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ ದಕ್ಷಿಣಕನ್ನಡ ಪೊಲೀಸ್ ಇಲಾಖೆಗೆ ಇದೀಗ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಮಧ್ಯರಾತ್ರಿ ಆಗಮಿಸಿ ಅವರ…

Read More

ಬೆಳ್ತಂಗಡಿಯ ಬೊಳಿಯಾರುವಿನಲ್ಲಿ ಕಾಡಾನೆ ದಾಳಿಗೆ ಆಟೋ ರಿಕ್ಷಾ ನಜ್ಜುಗುಜ್ಜು

ಬೆಳ್ತಂಗಡಿ : ಕಾಡಾನೆ ದಾಳಿಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಯೊಂದು ರಸ್ತೆ ಮಧ್ಯೆ ಎದುರಾಗಿದೆ. ಇದನ್ನು ಗಮನಿಸಿ ಆತಂಕಗೊಂಡ ದಿನೇಶ್, ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ರಿಕ್ಷಾವನ್ನು ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದೆ. ಸ್ಥಳೀಯರು ಸ್ಥಳಕ್ಕೆ…

Read More

‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್’ ಪ್ರಶಸ್ತಿ ತನ್ನದಾಗಿಸಿಕೊಂಡ 8 ವರ್ಷದ ಪ್ರತಿಭೆ

ಮಂಗಳೂರು ನಗರದ ಕುಲಶೇಖರ ನಿವಾಸಿಯಾದ ಕೇವಲ 8 ವರ್ಷದ ರುಶಭ್ ರಾವ್ ಅವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ, ಮೇ 25, 2025 ರಂದು ಗೋವಾದಲ್ಲಿ ಆಯೋಜಿಸಲಾದ “ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ 2025” ಸ್ಪರ್ಧೆಯಲ್ಲಿ ‘ಪ್ರಿನ್ಸ್ ಆಫ್‌ ಜೂನಿಯ‌ರ್ ಮಾಡೆಲ್ ಇಂಟರ್‌ನ್ಯಾಷನಲ್’ ಎಂಬ ಗೌರವಾನ್ವಿತ ಪ್ರಶಸ್ತಿಯನ್ನು ಗೆದ್ದು, ಮಂಗಳೂರಿಗೆ ಹಾಗೂ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಲೂರ್ಡ್ಸ್ ಸೆಂಟ್ರಲ್ ಶಾಲೆ, ಬಿಜೈ , ಮಂಗಳೂರು ಇಲ್ಲಿನ ಮೂರನೇ ತರಗತಿಯ ವಿದ್ಯಾರ್ಥಿಯಾದ ರುಶಭ್, ತನ್ನ ಅಪ್ರತಿಮ…

Read More

ಕುಡುಪು ಗುಂಪು ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು

ಮಂಗಳೂರು:ನಗರದ ಹೊರವಲಯದ ಕುಡುಪುವಿನಲ್ಲಿ 2025ರ ಎ.27ರಂದು ನಡೆದ ಅಶ್ರಫ್ ಗುಂಪು ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳಿಗೆ ಗುರುವಾರ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗುಂಪು ಹತ್ಯೆ ಪ್ರಕರಣದ 14ನೇ ಆರೋಪಿ ಸಂದೀಪ್, 15ನೇ ಆರೋಪಿ ದೀಕ್ಷಿತ್, 19ನೇ ಆರೋಪಿ ಸಚಿನ್ ಗೆ ಜಾಮೀನು ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ರಾಹುಲ್ ಮತ್ತು ಕೆ. ಸುಶಾಂತ್ ಗೆ ದಕ್ಷಿಣ ಕನ್ನಡ ಜಿಲ್ಲಾ ಎರಡನೇ ಹೆಚ್ಚುವರಿ ಜಿಲ್ಲಾ…

Read More

ನರಿಕೊಂಬು: 13ನೇ ವಯಸ್ಸಿನಲ್ಲಿ ಮನೆ ಬಿಟ್ಟು 62 ವರ್ಷ ನಂತರ ಮನೆಗೆ ಮರಳಿದ ವ್ಯಕ್ತಿ

ಬಂಟ್ವಾಳ: ತನ್ನ 13ನೇ ವಯಸ್ಸಿನಲ್ಲಿ ಮನೆ ಬಿಟ್ಟು ಮುಂಬಯಿಗೆ ತೆರಳಿದ್ದ ನರಿಕೊಂಬಿನ ವ್ಯಕ್ತಿಯೊಬ್ಬರು ಸುಮಾರು 62 ವರ್ಷಗಳ ಬಳಿಕ ಮನೆಗೆ ಆಗಮಿಸಿ ಅಚ್ಚರಿ ಮೂಡಿಸಿದ್ದಾರೆ.ನರಿಕೊಂಬು ಗ್ರಾಮದ ಕರ್ಬೆಟ್ಟು ಗೌಂಡ್ಲೆಪಾಲ್‌ ಸಂಜೀವ ಪೂಜಾರಿ (75) ಅವರು 62 ವರ್ಷಗಳ ಹಿಂದೆ ಸ್ಥಳೀಯ ನಿವಾಸಿ ತನಿಯಪ್ಪ ಅವರ ಜತೆಗೆ ಮುಂಬಯಿಗೆ ಕೆಲಸಕ್ಕಾಗಿ ತೆರಳಿದ್ದರು. ಬಳಿಕ ತಾವು ಹೋಗಿದ್ದ ಕೆಲಸವನ್ನು ಬಿಟ್ಟು ಮನೆಯವರ ಸಂಪರ್ಕವನ್ನೂ ಕಳೆದುಕೊಂಡಿದ್ದರು.ಮನೆಯವರು ಅಂದು ಅವರನ್ನು ಹುಡುಕುವ ಪ್ರಯತ್ನ ಮಾಡಿದ್ದರೂ ಪತ್ತೆಯಾಗಿರಲಿಲ್ಲ. ಆದರೆ ಗುರುವಾರ ಮಧ್ಯಾಹ್ನ ಅವರು ನರಿಕೊಂಬಿಗೆ…

Read More