admin

ಬಂಟ್ವಾಳ: ಯುವಕನ ಭೀಕರ ಹತ್ಯೆ ಪ್ರಕರಣ- 15 ಮಂದಿ ವಿರುದ್ಧ FIR

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ…

Read More

ಮಂಗಳೂರು: ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್..!!

ಮಂಗಳೂರು: ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್ ಮಾಡಲಾಗಿದೆ.  ಕದ್ರಿ ಪೊಲೀಸ್ ಠಾಣೆ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ನಡೆದ ಸಂದರ್ಭ ದಕ್ಷಿಣಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕದ್ರಿ ಪೊಲೀಸರಿಂದ ಶರಣ್ ಪಂಪ್ವೆಲ್ ಅರೆಸ್ಟ್ ಮಾಡಿದ್ದಾರೆ. ಶರಣ್ ಪಂಪ್ ವೆಲ್ ಅರೆಸ್ಟ್ ಸುದ್ದಿ ಹಿನ್ನಲೆ ಕದ್ರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.

Read More

ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ:ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಪತ್ತೆ

ಡೆಹ್ರಾಡೂನ್‌ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್‌, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ಈ ಘಟನೆ…

Read More

ಬಂಟ್ವಾಳ: ಪಿಕಪ್ ಚಾಲಕನ ಬರ್ಬರ ಹತ್ಯೆ..!!

ಬಂಟ್ವಾಳ:ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ‌ಯಲ್ಲಿಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ಹನೀಫ್ ಎಂಬಾತನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಯತ್ನ ನಡೆದ ಘಟನೆ ನಡೆದಿದೆ. ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ದಾಳಿ‌ ನಡೆಸಿದ್ದಾರೆ. ಜೊತೆಗಿದ್ದ ರಹೀಮ್ ಎಂಬಾತನ ಮೇಲೂ ದಾಳಿ.ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಶಾಸಕರಾದ ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಆರು ವರ್ಷ ಕಾಲ ಉಚ್ಚಾಟನೆ

ಬೆಂಗಳೂರು: ಹಿರಿಯ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಕಳೆದ ಮಾರ್ಚ್ 25ರಂದು ನೀಡಲಾದ ಶೋಕಾಸ್ ನೋಟಿಸ್ ಗೆ ಈ ಇಬ್ಬರು ಶಾಸಕರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಮತ್ತು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ಪಕ್ಷದ ಕೇಂದ್ರ ಶಿಸ್ತು ಸಮಿತಿ ಉಚ್ಚಾಟನಾ ಪತ್ರದಲ್ಲಿ ಉಲ್ಲೇಖಿಸಿದೆ.. “ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕರಾಗಿರುವ ಶಿವರಾಮ…

Read More

ಅದ್ದೂರಿಯಾಗಿ ನಡೆದ ಕುಲಾಲ ಸಂಘ ಕೊಲ್ಯ ಇದರ 60 ನೇ ವಾರ್ಷಿಕೋತ್ಸವ

ಕುಲಾಲ ಸಂಘ ಕೊಲ್ಯ ಇದರ 60 ನೇ ವಾರ್ಷಿಕೋತ್ಸವವು, ಕೊಲ್ಯ ಕುಲಾಲ ಸಮುದಾಯ ಭವನದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮದೊಂದಿಗೆ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು. ಶ್ರೀ ಭಾಸ್ಕರ್ ಕುತ್ತಾರ್ ವಹಿಸಿದ್ದರು. ಉದ್ಘಾಟನೆಯನ್ನು ಶ್ರೀ ದಯಾನಂದ ಪಿ ಎಸ್.( ಟ್ರಸ್ಟಿ ಶ್ರೀ ವೀರ ನಾರಾಯಣ ದೇವಸ್ಥಾನ.ಕುಲಶೇಖರ) ಇವರು ಮಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ. ಪೃಥ್ವಿರಾಜ್. ಗುರುಪುರ.(k. P. C. C. ಸದಸ್ಯರು.) ಶ್ರೀ ಗಂಗಾಧರ್ ಬಂಜನ್.(ರಾಜ್ಯಾಧ್ಯಕ್ಷರು ಕುಲಾಲ ಯುವ ವೇದಿಕೆ) ಶ್ರೀ ಅಶೋಕ್ ಕುಲಾಲ್…..

Read More

ಪುತ್ತೂರು: ಕಾರಿಗೆ ಬಸ್ ಡಿಕ್ಕಿ- ಮೂವರು ಗಂಭೀರ

ಪುತ್ತೂರು : ಕಾರು ಹಾಗೂ ಖಾಸಗಿ ಬಸ್‍ ಡಿಕ್ಕಿ ಹೊಡೆದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆಮುರ ಸಮೀಪ ಇಂದು ಮುಂಜಾನೆ ನಡೆದಿದೆ. ಅಪಘಾತದಿಂದ ಅಂಡೆಪುಣಿ ನಿವಾಸಿ ಈಶ್ವರ ಭಟ್‍, ಪುತ್ರಿ ಅಪೂರ್ವ ಹಾಗೂ ಅಪೂರ್ವ ಅವರ ಪುಟಾಣಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ನಡೆಯುವ ಶ್ರಾದ್ಧ ಕಾರ್ಯಕ್ರಮಕ್ಕೆ ಮಗಳು ಮತ್ತು ಮೊಮ್ಮಗಳನ್ನು ಕರೆದುಕೊಂಡು ಬರುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಇದರಿಂದ…

Read More

ಮಂಜೇಶ್ವರ : ಕಾಸರಗೋಡು ಜಿಲ್ಲಾ ಕುಲಾಲ ಸಮುದಾಯ ಭವನದ ಮಿನಿ ಸಭಾಂಗಣದ ಉದ್ಘಾಟನೆ, ಉಚಿತ ಪುಸ್ತಕ ವಿತರಣೆ, ಸಹಾಯ ಹಸ್ತ ವಿತರಣೆ,ಮಹಾಸಭೆ

ಮಂಜೇಶ್ವರ:- ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.)ಮಂಜೇಶ್ವರ, ತೂಮಿನಾಡು ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕುಲಾಲ ಸುಮುದಾಯ ಭವನದ ನೆಲ ಅಂತಸ್ತಿ ನಲ್ಲಿ ನಿರ್ಮಾಣಗೊಂಡಿರುವ ಮಿನಿ ಸಭಾಂಗಣದ ಉದ್ಘಾಟನೆಯು ಮೇ 25 ರಂದು ಜರಗಿತು. ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಉಚಿತ ಪುಸ್ತಕ ವಿತರಣೆ, 2024-25 ರ ಸಾಲಿನ ಎಸ್. ಎಸ್. ಎಲ್. ಸಿ ಹಾಗೂ ಪ್ಲಸ್ ಟು /ಪಿ. ಯು. ಸಿ ಯ ಕರ್ನಾಟಕ ಕೇರಳ ಪರೀಕ್ಷೆ ಯಲ್ಲಿ ಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಗೌರವಾರ್ಪಣೆ…

Read More

ಭಾರೀ ಮಳೆಯಿಂದಾಗಿ `ಶಿರಾಡಿಘಾಟ್’ ನ ಹಲವಡೆ ಭೂಕುಸಿತ.!

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ನ ಹಲವಡೆ ಭೂಕುಸಿತ ಉಂಟಾಗಿದೆ.  ರಾಷ್ಟ್ರೀಯ ಹೆದ್ದಾರಿಯ 75 ರ ಚತುಷ್ಪತ ರಸ್ತೆಯ ಹಲವು ಕಡೆ ಭೂಕುಸಿತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.  ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಮಳೆಯ ಆರ್ಭಟ ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉಳಿದಂತೆ ಹಾಸನ, ಕೊಡಗು, ಬೆಳಗಾವಿ, ಬೀದರ್,…

Read More

ಮೂಡಬಿದ್ರೆ: ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಸಿಲುಕ್ಕಿದ್ದ ಪ್ರವಾಸಿಗರ ರಕ್ಷಣೆ

ಮೂಡುಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್’ನಲ್ಲಿ ಮೋಜಿನಾಟಕ್ಕೆ ಹೋಗಿ ಸಂಕಷ್ಟಕ್ಕೆ ಸಿಲುಕ್ಕಿದ್ದ ಯುವಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮಳೆಗಾಲ ಸಂದರ್ಭದಲ್ಲಿ ಅಪಾಯಕಾರಿಯಾಗಿ ಹರಿಯುವ ಎರಗುಂಡಿ ಫಾಲ್ಸ್ ನಲ್ಲಿ ಈ ಮೊದಲು ಹಲವಾರು ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಬುದ್ದಿ ಕಲಿಯಲಿದ ಜನ ಮತ್ತೆ ಮಳೆ ಸುರಿಯುತ್ತಿದ್ದರೂ ಫಾಲ್ಸ್ ಬಳಿ ಮೋಜಿನಾಟಕ್ಕೆ ತೆರಳಿದ್ದಾರೆ. ನೀರಿನ ಅಪಾಯ ಲೆಕ್ಕಿಸದೆ ಪ್ರವಾಸಿಗರು ನೀರಿನಲ್ಲಿ ಆಟಕ್ಕೆ ಇಳಿದಿದ್ದಾರೆ. ಈ ವೇಳೆ ಮಳೆ ಜೊತೆ ನೀರಿನ ರಭಸವೂ ಹೆಚ್ಚಾಗಿದ್ದು, ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು…

Read More