admin

ರಷ್ಯಾದಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್‌ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ ಜತೆಗೆ…

Read More

ಮಂಗಳೂರಿನ ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ..!!

ಮಂಗಳೂರು: ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ರವರು ಹಾಗು ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ. ಎನ್ ರವರು ಸಿಬ್ಬಂದಿಯವರೊಂದಿಗೆ ಮಂಗಳೂರಿನ ಪಿಲಿಕುಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು. ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರು ಕೂಡ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು,…

Read More

ಬೆಳ್ತಂಗಡಿ: ಜಾತಿ ನಿಂದನೆ ಮಾಡಿ ಯುವಕನಿಗೆ ಕೊಲೆ ಬೆದರಿಕೆ- ಇಬ್ಬರ ಬಂಧನ

ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರು ಬಂಧಿತ ಆರೋಪಿಗಳು. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದರು. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು…

Read More

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸೀಮಂತದ ಸಂಭ್ರದಲ್ಲಿ ಕುಟುಂಬದಲ್ಲಿ…

Read More

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIAಗೆ ನೀಡಲು ಆಗ್ರಹಿಸಿ ಮೇ 25 ರಂದು ಜನಾಗ್ರಹ ಸಭೆ

ಮಂಗಳೂರು: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ ಐಎ ಗೆ ನೀಡಲು ಆಗ್ರಹಿಸಿ ಮೇ 25 ರಂದು ಬಜಪೆಯಲ್ಲಿ ಜನಾಗ್ರಹ ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್ ಭಜರಂಗದಳ ತಿಳಿಸಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಎಚ್ ಪಿ ಮುಖಂಡ ಪುರುಷೋತ್ತಮ್ ಜೋಗಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐಎ ಗೆ ವಹಿಸಲು ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಶ್ರದಾಂಜಲಿ ಸಭೆ ಬಜ್ಪೆಯಲ್ಲಿ ನಡೆಯಲಿದೆ ಎಂದು. ಮೇ 25 ರಂದು ಬಜ್ಪೆಯ…

Read More

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು, ಓರ್ವನ ಸ್ಥಿತಿ ಗಂಭೀರ..!

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಾಂಗಾಡ್ ನ ಮಾಣಿಕ್ಕೋತ್‌ನಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತಪಟ್ಟ ಮಕ್ಕಳು. ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಣಿ ಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ನಾಗರಿಕರು, ಅಗ್ನಿ ಶಾಮಕ ದಳದ…

Read More

ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯ..!

ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ  ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸಲ್ಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಸಲ್ಮಾನ್​ನ ಇಬ್ಬರ ಪುತ್ರರಾದ ರಿಯಾಬ್​, ಸಿಯಾಬ್​​ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಂಬಂಧಿ ಮುಸ್ತಫ ಎಂಬವರ ಮದುವೆಯನ್ನು ಸಲ್ಮಾನ್ ನೆರವೇರಿಸಿದ್ದ. ಇವರಿಬ್ಬರ ನಡುವೆ ಮದುವೆ ಸಂದರ್ಭದಲ್ಲಿ ವೈಮನಸ್ಸು ಉಂಟಾಗಿತ್ತು. ಇದೇ…

Read More

ಪುತ್ತೂರು: ಕೋಣೆಯಲ್ಲಿ ಕೂಡಿ ಹಾಕಿ ಮಹಿಳೆಯ ದಿಗ್ಭಂಧನ- ಪೊಲೀಸರಿಂದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ತಿಳಿಸಿದ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರ್ಲಡ್ಕ ಎಂಬಲ್ಲಿ  ವ್ಯಕ್ತಿಯೊಬ್ಬ ದಿಗ್ಭಂಧನ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೈಶ್ಯಾವಾಟಿಕೆ ಶಂಕೆ ವ್ಯಕ್ತವಾಗಿದೆ. ಪುತ್ತೂರು ನಗರ ಪೋಲೀಸರು ಮಹಿಳೆಯ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಪಾಕಿಸ್ತಾನಕ್ಕೆ ಭಾರತದ ಒಂದು ಹನಿ ನೀರು ಸಿಗುವುದಿಲ್ಲ : ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಘರ್ಜನೆ

ಬಿಕಾನೆರ್ : ಏಪ್ರಿಲ್ 22 ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ 22 ನಿಮಿಷಗಳಲ್ಲಿ ಸೇಡು ತೀರಿಸಿಕೊಂಡಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನ ಬಿಕಾನೆರ್‌ನ ದೇಶ್ನೋಕ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ,  ಭಾರತದ ರಕ್ತದೊಂದಿಗೆ ಆಟವಾಡಿದ್ದಕ್ಕಾಗಿ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ. ಇದು ಭಾರತದ ನಿರ್ಣಯ ಮತ್ತು ಈ ನಿರ್ಣಯದಿಂದ ನಮ್ಮನ್ನು ಅಲುಗಾಡಿಸಲು ವಿಶ್ವದ ಯಾವುದೇ ಶಕ್ತಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಸೇನೆ ಮತ್ತು ಆರ್ಥಿಕತೆಯು ಪ್ರತಿಯೊಂದು ಭಯೋತ್ಪಾದಕ ದಾಳಿಗೆ ಬೆಲೆ ತೆರಬೇಕಾಗುತ್ತದೆ… ಪಾಕಿಸ್ತಾನ ಬಿಕಾನೆರ್‌ನ…

Read More

ಕನ್ನಡವನ್ನೇ ಮಾತಾಡಲ್ಲ ಎಂದ ಎಸ್‌ಬಿಐ ಮಹಿಳಾ ಮ್ಯಾನೇಜರ್‌: ಕನ್ನಡಿಗರ ಆಕ್ರೋಶ  ಬೆನ್ನಲ್ಲೇ ವರ್ಗಾವಣೆ 

ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮಹಿಳಾ ಮ್ಯಾನೇಜರ್‌ ನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕನ್ನಡಿಗರ ಹೋರಾಟಕ್ಕೆ ಹೆದರಿ ರಾತ್ರೋರಾತ್ರಿ ಮ್ಯಾನೇಜರ್‌ನನ್ನು ಟ್ರಾನ್ಸ್‌ಫರ್ ಮಾಡಲಾಗಿದೆ. ಮಹಿಳಾ ಮ್ಯಾನೇಜರ್‌ನನ್ನು ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸುವಂತೆ ಆದೇಶ ನೀಡಲಾಗಿದೆ ಎಂದು ಎಸ್‌ಬಿಐ ಮೂಲಗಳು ತಿಳಿಸಿವೆ. ಗ್ರಾಹಕರೊಬ್ಬರು ಕೆಲಸದ ನಿಮಿತ್ತ ಬೆಂಗಳೂರು ಹೊರವಲಯದ ಚಂದಾಪುರ ಎಸ್‌ಬಿಐ ಬ್ಯಾಂಕ್‌ಗೆ ಹೋದಾಗ ಕನ್ನಡ ಮಾತನಾಡುವಂತೆ ಮಹಿಳಾ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದ್ದಾರೆ. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್…

Read More