admin

ಮಂಗಳೂರು: ಬಾಡಿಗೆ ಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..! ಕೊಲೆ ಶಂಕೆ

ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದಾನೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ. ಪಲ್ಲವಿಯ ಪತಿ ನವೀನ್ ಹಾಗೂ ಅತ್ತೆ ಶಾಂತಾ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಭಾನುವಾರ ಶವ ಪತ್ತೆಯಾಗಿದ್ದು, ಘಟನೆಯ ಬಳಿಕ ನವೀನ್ ತಲೆಮರೆಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು…

Read More

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ-ಸಂಕಷ್ಟಕ್ಕೀಡಾದ ಜನ

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಕೋಟ್ಯಂತರ ರೂಪಾಯಿ ವಂಚನೆ ಎಸಗಿದ್ದು, 185ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Hire Glow Elegent overseas international Private Ltd ಎಂಬ ಹೆಸರಿನಿಂದ ವಂಚನೆಗೊಳಗಾದ 185 ಜನ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಕೇರಳ ಸೇರಿದಂತೆ ಇತರ ಕೆಲವು ರಾಜ್ಯಗಳ ಜನರೂ ವಂಚನೆಗೆ ಒಳಗಾಗಿದ್ದಾರೆ. ಇದೀಗ ವಂಚನೆಗೊಳಗಾದವರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ವಂಚನೆಯ ಕರಾಳ ಮುಖ ಅನಾವರಣಗೊಂಡಿದೆ. ಮಂಗಳೂರಿನ ಕಂಕನಾಡಿಯಲ್ಲಿ ಕಚೇರಿಯನ್ನು ‌ಹೊಂದಿದ್ದ ಖಾಸಗಿ…

Read More

ಮಂಗಳೂರು : ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಖೈದಿಗಳಿಂದ ಅಟ್ಯಾಕ್

ಮಂಗಳೂರು ; ಸುಹಾಸ್ ಶೆಟ್ಟಿ ಹತ್ಯೆ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಮಂಗಳೂರು ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಪರಾದ ನೌಷಾದ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ‌ ಮೈಸೂರು ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆಸಿದ್ದರು. ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದಿದ್ದ ನೌಷಾದ್ ಜೈಲಿನಲ್ಲಿ ಮತ್ತೋರ್ವ ಖೈದಿ…

Read More

ಮೇ 20ರಂದು ಉಡುಪಿ, ದ.ಕ, ಉ.ಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯಾಗುವ ಸಾಧ್ಯತೆ

ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ರೆಡ್ ಅಲರ್ಟ್ ಘೋಷಣೆ ಆಗಿರುವ ಕಾರಣ ನಾಳೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರೀ ಸುಂಟರಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಇಡೀ ದಿನ ಜಿಲ್ಲೆಯಾದ್ಯಂತ‌ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಗೆ ಜನರು ಪರದಾಡಿದರು….

Read More

ನಾವು ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂತ ಹೇಳಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

 ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿನ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು. ಆಗ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು. ಈಗ ಗುತ್ತಿಗೆ ಕೆಲಸ…

Read More

ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

ಬೆಂಗಳೂರು : ಪಂಜಾಬ್ ನಲ್ಲಿ ಧರ್ಮಸ್ಥಳ ಮೂಲದ ಯುವತಿ, ಏರೋಸ್ಪೇಸ್ ಉದ್ಯೋಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರೇಮ ವೈಫಲ್ಯದಿಂದ ಆಕಾಂಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆಕಾಂಕ್ಷಾ ಪಗ್ವಾಡ ಕಾಲೇಜಿನ ಪ್ರೊ. ಮ್ಯಾಥ್ಯೂ ಅವರನ್ನು ಪ್ರೀತಿಸುತ್ತಿದ್ದರು. ಕಾಲೇಜಿಗೆ ಸರ್ಟಿಫಿಕೇಟ್ ತರಲು ಹೋದಾಗ ಬ್ರೇಕಪ್ ವಿಚಾರಕ್ಕೆ ಪ್ರೊ. ಮ್ಯಾಥ್ಯೂ ಜೊತೆ ಆಕಾಂಕ್ಷ ಗಲಾಟೆ ಮಾಡಿದ್ದಾರೆ. ನಂತರ ಮನನೊಂದು ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯ, ಪ್ರೊ…

Read More

ಸುಹಾಸ್‌ ಹತ್ಯೆ ಪ್ರಕರಣ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟ‌ರ್ ವಿರುದ್ಧ FIR

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮಾಜಿ ಕಾರ್ಪೊರೇಟ‌ರ್ ಶ್ವೇತಾ ಪೂಜಾರಿ ಮೇಲೆ ಎಫ್‌ಐಆ‌ರ್ ದಾಖಲಾಗಿದೆ. ಶ್ವೇತಾ ಪೂಜಾರಿ ಮೇಲೆ ಎಫ್‌ಐಆ‌ರ್ ದಾಖಲಾಗಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ…

Read More

ಕುಲಾಲ/ಕುಂಬಾರರ ಯುವವೇದಿಕೆ ಉಳ್ಳಾಲ ಇದರ ಆಶ್ರಯದಲ್ಲಿ SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ/ಕುಂಬಾರರ ಯುವವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಉಳ್ಳಾಲ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ ಮೇ.18ರಂದು ರವಿವಾರ ಶ್ರೀರಕ್ತೇಶ್ವರಿ ಅಮ್ಮನವರ ಸನ್ನಿಧಿ ಟ್ರಸ್ಟ್ (ರಿ.) ವಿದ್ಯಾನಗರ ನರಿಂಗಾನ ಇಲ್ಲಿ ನಡೆಯಿತು. 2024-25ನೇ ಸಾಲಿನಲ್ಲಿ ನಡೆದ SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಶ್ರೀ ವೈಷ್ಣವಿ ಕ್ಷೇತ್ರ ಮುಳಿಯ ದೀಪ…

Read More

ಪುತ್ತೂರು: ಲಾರಿಗೆ ಹಿಂದಿನಿಂದ ಬೈಕ್‍ ಡಿಕ್ಕಿ..! ಸವಾರ ಮೃತ್ಯು

ಪುತ್ತೂರು: ಶಾಮಿಯಾನ ಲಾರಿಗೆ ಹಿಂದಿನಿಂದ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುದೀಪ್‍ ಚೊಕ್ಕಾಡಿ ಮೃತಪಟ್ಟ ಬೈಕ್‍ ಸವಾರ ಗಂಭೀರ ಗಾಯಗೊಂಡ ಸುದೀಪ್‍ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುದೀಪ್‍ ಮುರ ಸಮೀಪ ಆಯುರ್ವೇದಿಕ್‍ ಔಷಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳ್ತಂಗಡಿ ಮೂಲದ ಏರೋಸ್ಪೇಸ್ ಇಂಜಿನಿಯರ್ ಪಂಜಾಬ್ ನಲ್ಲಿ ನಿಗೂಢವಾಗಿ ಸಾವು..!

ಬೆಳ್ತಂಗಡಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿಯೋರ್ವಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಪ್ಪತ್ತೆರಡು ವರ್ಷದ ಆಕಾಂಕ್ಷ ಮೃತ ದುರ್ದೈವಿ. ಧರ್ಮಸ್ಥಳ ಬೋಳಿಯಾರ್ ನಿವಾಸಿಗಳಾದ ಸುರೇಂದ್ರ ಹಾಗುಹ ಸಿಂಧೂದೇವಿ ದಂಪತಿಯ ಮಗಳು ಆಕಾಂಕ್ಷ. ಈಕೆ ಪಂಜಾಬ್ ನ ಫಗ್ವಾಡಾ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಮುಗಿಸಿ ಆರು ತಿಂಗಳ ಹಿಂದೆಯಷ್ಟೇ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ವೃತ್ತಿ ಜೀವನ ಶುರು ಮಾಡಿದ್ದರು. ಶೈಕ್ಷಣಿಕ ಪ್ರಮಾಣ ಪತ್ರಕ್ಕಾಗಿ ಪಂಜಾಬ್ ಗೆ ಆಗಮಿಸಿದ್ದ ಆಕಾಂಕ್ಷ ನಂತರ ಮನೆಯವರ ಜೊತೆ…

Read More