admin

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ – ಡಾ.ಭರತ್‌ ಶೆಟ್ಟಿ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಘಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ ಸಹಚರರು. ಇಷ್ಟು ಮಾತ್ರವಲ್ಲದೆ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ…

Read More

ಮಂಗಳೂರು: ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ಹಡಗು ಮುಳುಗಡೆ

ಮಂಗಳೂರು: ನಗರದ ಬಂದರ್‌ ನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ʼಎಂಎಸ್‌ವಿ ಸಲಾಮತ್ʼ ಎಂಬ ಹೆಸರಿನ ಸರಕು ಸಾಗಣೆಯ ಹಡಗು ಕರ್ನಾಟಕ ಕರಾವಳಿಯ ಮಂಗಳೂರಿನ ನೈರುತ್ಯಕ್ಕೆ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿ ಬುಧವಾರ ಮುಂಜಾನೆ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 6 ಮಂದಿ ಸಿಬಂದಿಯನ್ನು ಕೋಸ್ಟ್‌ಗಾರ್ಡ್ ರಕ್ಷಿಸಿದೆ. ಮೇ 12ರಂದು ಈ ಹಡಗು ಮಂಗಳೂರು ಬಂದರ್‌ ನಿಂದ ಲಕ್ಷದ್ವೀಪಕ್ಕೆ ಸಿಮೆಂಟ್, ಕಟ್ಟಡ ಸಾಮಗ್ರಿಯನ್ನು ಒಳಗೊಂಡ ಸರಕುಗಳನ್ನು ಹೇರಿಕೊಂಡು ಸಾಗುತ್ತಿತ್ತು. ಮೇ 18ರಂದು ಕಡ್ಮತ್ ದ್ವೀಪವನ್ನು ತಲುಪುವ ನಿರೀಕ್ಷೆಯಿತ್ತು. ಆದರೆ ಮೇ 14ರ ಮುಂಜಾನೆ…

Read More

SBI ನಲ್ಲಿ 3,323 ಹುದ್ದೆಗಳಿಗೆ ಅರ್ಜಿ ಆಹ್ವಾನ 

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿಸುದ್ದಿ ನೀಡಿದ್ದು,SBI ವೃತ್ತ ಆಧಾರಿತ ಅಧಿಕಾರಿಗಳ (CBO) ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಮೇ 29, 2025 ರಂದು ಅಥವಾ ಅದಕ್ಕೂ ಮೊದಲು ತಮ್ಮ ಅರ್ಜಿಗಳನ್ನು ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಭ್ಯರ್ಥಿಗಳ ಆಯ್ಕೆಯು ಹಲವಾರು ಮೌಲ್ಯಮಾಪನಗಳನ್ನು ಆಧರಿಸಿದೆ ಎಂಬುದನ್ನು ಆಸಕ್ತರು ಗಮನಿಸಬೇಕು – ಆನ್‌ಲೈನ್ ಪರೀಕ್ಷೆ, ಸ್ಕ್ರೀನಿಂಗ್, ಸಂದರ್ಶನ ಮತ್ತು ಭಾಷಾ…

Read More

ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್: 225 ಮದರಸಾ, 30 ಮಸೀದಿಗಳು ಸೇರಿದಂತೆ 280 ಸಂಸ್ಥೆಗಳು ಬುಲ್ಢೋಝ್

ಲಕ್ನೋ: ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿನ ಮುಸ್ಲಿಂ ಧಾರ್ಮಿಕ ಸಂಸ್ಥೆಗಳ ವಿರುದ್ಧ ಯುಪಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇರ ಆದೇಶದ ಮೇರೆಗೆ 225 ಮದರಸಾಗಳು, 30 ಮಸೀದಿಗಳು, 25 ಸಮಾಧಿಗಳು ಮತ್ತು 6 ಈದ್ಗಾಗಳನ್ನು ಕೆಡವಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕ್ರಮಗಳು ಮಹಾರಾಜ್‌ಗಂಜ್, ಶ್ರಾವಸ್ತಿ, ಬಹ್ರೈಚ್, ಸಿದ್ಧಾರ್ಥನಗರ, ಬಲರಾಮ್‌ಪುರ್, ಲಖಿಂಪುರ ಖೇರಿ ಮತ್ತು ಪಿಲಿಭಿತ್ ಸೇರಿದಂತೆ ಏಳು ಗಡಿ ಜಿಲ್ಲೆಗಳ ಮೇಲೆ ಕೇಂದ್ರೀಕೃತವಾಗಿವೆ. ಶ್ರಾವಸ್ತಿ ಒಂದರಲ್ಲೇ 104…

Read More

ಮಂಗಳೂರು: ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಿಸಿದ್ದಾರೆ. ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ಎಸ್.ಪಿ. ನೇತೃತ್ವದಲ್ಲಿ ದಾಳಿ ನಡೆದಿದ್ದು ಅದರಂತೆ ಮಂಗಳೂರಿನ ಬಿಜೈನಲ್ಲಿರುವ ಮಂಜುನಾಥ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ…

Read More

ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

ಕುಂದಾಪುರ:  ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿ, ತಂದೆ ಮತ್ತು ಮಗ ಮೃತಪಟ್ಟು, ತಾಯಿಯ ಪರಿಸ್ಥಿತಿ ಗಂಭೀರವಾದ ಘಟನೆ ಮೇ 15ರ ಗುರುವಾರ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಮೃತಪಟ್ಟವರು. ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕೋಟದ ಜೀವನ್ ಮಿತ್ರ ನಾಗರಾಜ್ ಅವರ ಆಂಬುಲೆನ್ಸ್‌ ಸಹಾಯದಿಂದ ತತ್ ಕ್ಷಣವೇ ಕೋಟೇಶ್ವರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗುರುವಾರ ಮುಂಜಾನೆ ಮನೆಯ ಸಮೀಪದಲ್ಲಿರುವ ಬಾವಿಗೆ…

Read More

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು. ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ…

Read More

ಲಂಚ ಸ್ವೀಕರಿಸುತ್ತಿದ್ದ ಬಂಟ್ವಾಳ ತಾಲೂಕಿನ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ

ಬಂಟ್ವಾಳ: ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ನೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ. ಬಳಿಕ ಮಹಿಳೆ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಅವರ ಗಂಡನ…

Read More

‘ಆಪರೇಷನ್ ಸಿಂಧೂರ್’ ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸಿದೆ: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸುವ ಜತೆಗೆ ಪಾಕಿಸ್ತಾನಕ್ಕೂ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದಂತಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ದೇಶದ ಪ್ರಮುಖ ವಾಯುನೆಲೆಗೆ ಪಾಕಿಸ್ತಾನದ ವಿರುದ್ಧದ ಸಂಘರ್ಷ ನಡೆಯುತ್ತಿರುವಾಗಲೇ ಭೇಟಿ ನೀಡಿರುವುದು ಗಮನಾರ್ಹ ಬೆಳವಣಿಗೆ. ಇದರೊಂದಿಗೆ ಅವರು ಕಾರ್ಯಾ ಚರಣೆ ಮುಂಚೂಣಿಯಲ್ಲಿರುವ…

Read More

ಪಾಕ್ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಬಂಧಿತ BSF ಯೋಧ ಕೊನೆಗೂ ಬಿಡುಗಡೆ

ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು.. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು ಭಾರತದ ವಶಕ್ಕೆ ನೀಡಲಾಗಿದೆ ಎಂದು…

Read More