ಉಡುಪಿ: ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!
ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಲ್ಕುಟ್ಟು ಎಂಬಲ್ಲಿ ನಡೆದಿದೆ. ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಮನ್ವಿ ಆತ್ಮ*ಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ. ಫೋನ್‌ನಲ್ಲೇ ಕಾಲ ಕಳೆಯುತ್ತಿದ್ದ ಮಗಳಿಗೆ ಮನೆಯಲ್ಲಿ ತಾಯಿ ಓದುವಂತೆ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಮನೆಮಂದಿ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂಧಿಸದೇ ಆಕೆ ಮೃತಪಟ್ಟಿದ್ದಾಳೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

