admin

ಜೈಶ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್ ಕುಟುಂಬದ 14 ಮಂದಿ ಹತ್ಯೆ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ 25 ನಿಮಿಷಗಳ ಕಾರ್ಯಾಚರಣೆಯಲ್ಲಿ ಭಾರತೀಯ ಪಡೆಗಳು ಜೈಶ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್ನ ಕುಟುಂಬದ 14 ಸದಸ್ಯರನ್ನು ಹತ್ಯೆಗೈದಿವೆ ಎನ್ನಲಾಗಿದೆ. ಆಪರೇಷನ್ ಸಿಂಧೂರ್ನಲ್ಲಿ ಕೊಲ್ಲಲ್ಪಟ್ಟವರಲ್ಲಿ ಮಸೂದ್ ಅಜರ್ ಸಹೋದರನ ಮಗ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ರವೂಫ್ ಅಸ್ಗರ್ ಸೇರಿದ್ದಾರೆ. ರವೂಫ್ ಅಸ್ಗರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಭಾರತೀಯ ಸೇನೆಯ ಆಪರೇಶನ್ ಸಿಂದುರ್‌ನಲ್ಲಿ ಮಸೂದ್ ಅಜ್ಹರ್ ಅವರ ಕುಟುಂಬದ 14 ಜನರ ಸಾವಿನ ಸುದ್ದಿ ಬಂದಿದೆ. ಇದರಲ್ಲಿ…

Read More

ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ಮಹಾತ್ಮ ಗಾಂಧೀಜಿ ಹೇಳಿಕೆ ಹಂಚಿಕೊಂಡು ಕಾಂಗ್ರೆಸ್‌ ಎಡವಟ್ಟು

ಬೆಂಗಳೂರು: ಇಂದು ಮುಂಜಾನೆ ಭಾರತೀಯ ಯೋಧರು ನಡೆಸಿದ ಆಪರೇಷನ್‌ ಸಿಂಧೂರ್‌ ಸರ್ಜಿಕಲ್‌ ಸ್ಟ್ರೈಕ್‌ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಸೇನೆಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್‌ ಮಹಾತ್ಮ ಗಾಂಧೀಜಿಯವರ ಸಂದೇಶವನ್ನು ಹಂಚಿಕೊಂಡು ಎಡವಟ್ಟು ಮಾಡಿಕೊಂಡಿದೆ. ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ತನ್ನ ಎಕ್ಸ್‌ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್‌, ಮಹಾತ್ಮ ಗಾಂಧಿ ಅವರ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂಬ ಸಂದೇಶವನ್ನು ಹಂಚಿಕೊಂಡಿತ್ತು. ಇದಕ್ಕೆ ಕಾಂಗ್ರೆಸ್‌ ವಿರುದ್ಧ ನೆಟ್ಟಿಗರು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ…

Read More

ಪಾಕ್ ವಿರುದ್ಧ ‘ಆಪರೇಷನ್ ಸಿಂಧೂರ’ 9 ಉಗ್ರರ ನೆಲೆಗಳು ನಾಶ ಮಾಡಿದ ಭಾರತೀಯ ಸೇನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದಾಳಿಯಲ್ಲಿ ಸುಮಾರು 70ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಏಪ್ರಿಲ್ 22 ರಂದು ಪಾಕ್ ಬೆಂಬಲಿತ…

Read More

ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್..!

ಬೆಂಗಳೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ವಿವಾದಕ್ಕೆ ಸಿಲುಕಿದ್ದಂತ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನ ಸಂಗೀತ ಕಾರ್ಯಕ್ರಮ ನಡೆಸುವಾಗ ಖ್ಯಾತ ಗಾಯಕ ಸೋನು ನಿಗಮ್ ಅವರು ಹೇಳಿದ್ದಂತ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ದ ಎಫ್‌ಐಆರ್ ಕೂಡ ದಾಖಲಾಗಿತ್ತು. ಇಂದು ಕನ್ನಡ ಚಿತ್ರರಂಗದಿಂದ ಅವರನ್ನು ಬ್ಯಾನ್ ಕೂಡ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಎಲ್ಲಾ ಬೆಳವಣಿಗೆಯ ನಂತ್ರ ಕೊನೆಗೂ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ…

Read More

ರಸ್ತೆ ಅಪಘಾತ ‘ಸಂತ್ರಸ್ತ’ರಿಗೆ ದೇಶಾದ್ಯಂತ 1.5 ಲಕ್ಷ ರೂ.ಗಳ ನಗದು ರಹಿತ ಚಿಕಿತ್ಸೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ: ದೇಶಾದ್ಯಂತ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಗೆಜೆಟ್ ಅಧಿಸೂಚನೆಯ ಪ್ರಕಾರ, ಈ ಯೋಜನೆಯಡಿ ((ರಸ್ತೆ ಅಪಘಾತ ಸಂತ್ರಸ್ತರ ನಗದುರಹಿತ ಚಿಕಿತ್ಸೆ ಯೋಜನೆ, 2025), ಅಂತಹ ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಸಂತ್ರಸ್ತರು ನಗದುರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಅಂತ…

Read More

ಬೆಳ್ತಂಗಡಿ : ಮನೆಗೆ ನುಗ್ಗಿ ನಗನಗದು ಕಳವು ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್‌..!

ಬೆಳ್ತಂಗಡಿ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆಯ ಮಾಲೂರು ತಾಲೂಕಿನ ಅಂಗಡಿಹಳ್ಳಿ ನಿವಾಸಿ ಶಿವರಾಜ್ ಯಾನೆ ಶಿವಕೇರಿ ( 32) ಹಾಗೂ ಮಂಗಳೂರು ಕಣ್ಣೂರು ನಿವಾಸಿ ಸಂತೋಷ್ ( 26) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕು, ಮಾಲಾಡಿ ಗ್ರಾಮದ ಕೊಲ್ಪೆದಬೈಲು ವಸಂತಿ ಹೆಗ್ಡೆ ಎಂಬವರ ಮನೆಯಲ್ಲಿ ಎ. 20 ರಂದು ಕಳ್ಳರು ಬೀಗ ಮುರಿದು…

Read More

ಮಂಗಳೂರು ಹೈ ಅಲರ್ಟ್: ರಾತ್ರಿ 9.30ರ ಒಳಗೆ ಅಂಗಡಿ, ಹೋಟೆಲ್, ಬಾರ್ ಎಲ್ಲವೂ ಬಂದ್​

ಮಂಗಳೂರು: ಕರಾವಳಿಯಲ್ಲಿ, ವಿಶೇಷವಾಗಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಪ್ರಕಟಿಸಿರುವ ಕಾರಣ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ ಎಂದು ಸಂದೇಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಹೋಟೆಲ್, ಪಬ್, ಬಾರ್​ಗಳು, ಫುಟ್​ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗುತ್ತಿದೆ….

Read More

ಪಾಕಿಸ್ತಾನದ ವಿರುದ್ಧ ಸಮರಕ್ಕೆ ಭಾರತ ಸಜ್ಜು : ನಾಳೆಯಿಂದ ದೇಶಾದ್ಯಂತ ʻಯುದ್ಧದ ಡ್ರಿಲ್‌ʼ, ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಸೈರನ್‌.!

ನವದೆಹಲಿ : ಭಾರತ ಸರ್ಕಾರವು ಮೇ 7, 2025 ರಂದು ದೇಶಾದ್ಯಂತ ಗುರುತಿಸಲಾದ 244 ನಾಗರಿಕ ರಕ್ಷಣಾ ಜಿಲ್ಲೆಗಳಲ್ಲಿ ಬೃಹತ್ ಅಣಕು ಡ್ರಿಲ್ ಅನ್ನು ಆಯೋಜಿಸಲಿದೆ. ಕ್ಷಿಪಣಿ ದಾಳಿ ಅಥವಾ ವಾಯುದಾಳಿಗಳಂತಹ ಯುದ್ಧದಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ಎಷ್ಟು ಬೇಗನೆ ಮತ್ತು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಬಹುದು ಎಂಬುದನ್ನು ಪರೀಕ್ಷಿಸುವುದು ಇದರ ಉದ್ದೇಶವಾಗಿದೆ. ಈ ಅಣಕು ಪ್ರದರ್ಶನವು ನಿಜ ಜೀವನದ ಸನ್ನಿವೇಶಗಳನ್ನು ಅನುಕರಿಸುತ್ತದೆ, ವಾಯುದಾಳಿಯ ಸೈರನ್‌ಗಳು ಸದ್ದು ಮಾಡುವುದು, ನಗರಗಳಲ್ಲಿ ವಿದ್ಯುತ್ ಕಡಿತಗೊಳ್ಳುವುದು, ಆಶ್ರಯ ಪಡೆಯುವ ಅಭ್ಯಾಸ ಮಾಡುತ್ತಿರುವ ಜನರು ಮತ್ತು…

Read More

ಸುಹಾಸ್ ಭೀಕರ ಹತ್ಯೆ ಪ್ರಕರಣ : ಈ ಕೃತ್ಯದಲ್ಲಿ ಬಜಪೆ ಠಾಣೆಯ ಹೆಡ್ ಕಾನ್ಸ್ಟೇಬಲ್ ರಶೀದ್ ನ ಬಗ್ಗೆ VHP ಅನುಮಾನ..!

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಸಂಘಟನೆ ಮೇಲೆ ನೇರ ಅನುಮಾನವಿದೆ ಇದರಲ್ಲಿ ಬಜ್ಪೆ ಪೋಲೀಸರ ಕೈವಾಡವಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೃತ್ಯಕ್ಕಾಗಿ 50 ಲಕ್ಷಕ್ಕೂ ಹೆಚ್ಚು ಮೊತ್ತದ ಹಣ ಹೂಡಿಕೆಯಾಗಿದ್ದು, ಇದರ ಹಿಂದೆ ದೊಡ್ಡ ಶಕ್ತಿ ಕೆಲಸ ಮಾಡಿದೆ ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ. ಉಲ್ಲಾಸ್ ಆರೋಪಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಉಲ್ಲಾಸ್ ಪಿಎಫ್‌ಐನ ಟಾರ್ಗೆಟೆಡ್ ಕಿಲ್ಲಿಂಗ್ ಈ ಪ್ರಕರಣದಲ್ಲೂ ನಡೆದಿದೆ ಸುಖಾನಂದ ಶೆಟ್ಟಿ ಹತ್ಯೆ ಪ್ರಕರಣದ…

Read More

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ..!

ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್‌ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ…

Read More