ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 8 ಆರೋಪಿಗಳು ಸೆರೆ- ತೀವ್ರ ವಿಚಾರಣೆ
ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ…

