admin

500 ರೂ.ನ ನಕಲಿ ನೋಟುಗಳ ಬಗ್ಗೆ ಎಚ್ಚರಿಕೆ.! ಕೇಂದ್ರ ಸರ್ಕಾರದಿಂದ ಮಹತ್ವದ ಪ್ರಕಟಣೆ

ನವದೆಹಲಿ: ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಗೃಹ ಸಚಿವಾಲಯ (ಎಂಎಚ್ಎ) ಸೋಮವಾರ ಎಲ್ಲಾ ಹಣಕಾಸು ನಿಯಂತ್ರಕ ಮತ್ತು ಜಾರಿ ಸಂಸ್ಥೆಗಳಿಗೆ ಮತ್ತು ನಗದು ವ್ಯವಹಾರ ನಡೆಸುವ ಬ್ಯಾಂಕುಗಳಿಗೆ “ಉತ್ತಮ ಗುಣಮಟ್ಟದ 500 ರೂ.ಗಳ ನಕಲಿ ಕರೆನ್ಸಿ ನೋಟುಗಳ” ಬಗ್ಗೆ ಎಚ್ಚರಿಕೆ ನೀಡಿದೆ. ಎಂಎಚ್ಎ ತನ್ನ ಎಚ್ಚರಿಕೆಯಲ್ಲಿ, ನಕಲಿ ಮತ್ತು ಅಸಲಿ ನೋಟುಗಳ ನಡುವಿನ ವ್ಯತ್ಯಾಸವನ್ನು ತೋರಿಸಿದೆ, ನಕಲಿ ನೋಟುಗಳು ಅಧಿಕೃತ ನೋಟುಗಳಿಗೆ ಗಮನಾರ್ಹ ಹೋಲಿಕೆಯನ್ನು ಹೊಂದಿದ್ದರೂ, “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ” ಎಂಬ ಪದಗುಚ್ಛದಲ್ಲಿ “ಕಾಗುಣಿತ ದೋಷ”…

Read More

ದೈವಸ್ಥಾನದ ಡಬ್ಬಿ ಒಡೆದು ಕಳ್ಳತನ ಮಾಡಿ ಕಿಡಿಗೇಡಿಗಳು ಪರಾರಿ..!

ಉಡುಪಿ: ಕರಾವಳಿ ಅಂದ್ರೆ ಇಲ್ಲಿ ಜನರು ದೇವರನ್ನು ನಂಬುವಷ್ಟೇ ದೈವವನ್ನು ಕೂಡಾ ಶ್ರದ್ಧಾಭಕ್ತಿಯಿಂದ ಆರಾಧಿಸುತ್ತಾರೆ. ದೈವಾರಾಧನೆಗೆ ಹೆಸರಾದ ನಮ್ಮ ಈ ಪುಣ್ಯ ಸ್ಥಳದಲ್ಲೂ ಅನೇಕ ದುಷ್ಕೃತ್ಯಗಳು ನಡೆಯುತ್ತಿದೆ. ಇದೀಗ ಉಡುಪಿಯ ಮಲ್ಪೆಯಲ್ಲಿ ದೈವಸ್ಥಾನದ ಡಬ್ಬಿಯನ್ನೇ ಒಡೆದು ಕಳ್ಳತನ ಮಾಡಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಇಲ್ಲಿನ ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಆವರಣ ಗೋಡೆಯ ಹೊರಭಾಗದಲ್ಲಿ ಇಟ್ಟಿದ್ದಂತಹ ಕಾಣಿಕೆ ಡಬ್ಬಿ ಒಡೆದು ಹಣ ದೋಚಿ ಕಿಡಿಗೇಡಿಗಳೂ ಕೂಡಾ ಎಸ್ಕೇಪ್ ಆಗಿದ್ದಾರೆ. ಕಾಣಿಕೆ ಡಬ್ಬಿಯಲ್ಲಿದ್ದ ಅಂದಾಜು…

Read More

ಬೆಳ್ತಂಗಡಿ: ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ..!!

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಸಂಜೆ ನಡೆದಿದೆ. ಈ ಭೀಕರದ ಅಪಘಾತದಲ್ಲಿಕಾರಿನಲ್ಲಿದ್ದ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50) ಹಾಗೂ ವೈಭವ್ (23) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಗುರುವಾಯನಕೆರೆಯಿಂದ ಹಾಗೂ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

Read More

ಉಪ್ಪಿನಂಗಡಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಪೋಕ್ಸೊದಡಿ ಬಂಧನ

ಉಪ್ಪಿನಂಗಡಿ: ಕಾಲೇಜು ಬಿಟ್ಟು ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಉಪ್ಪಿನಂಗಡಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದ್ದು, ಸಂಬಂಧಿಕ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕೇಸ್‌ ದಾಖಲಿಸಿ ಬಂಧಿಸಿದ್ದಾರೆ. 16ರ ಹರೆಯದ ಯುವತಿ ದೂರದ ಸಂಬಂಧಿಕ ರಮೇಶ ಎಂಬವನ ಮನೆಗೆ ಫೆ.10ರಂದು ಹೋಗಿದ್ದಳು. ಅಂದು ರಾತ್ರಿ ರಮೇಶ ಆಕೆಯನ್ನು ಪುಸಲಾಯಿಸಿ, ಬೆದರಿಸಿ ದೈಹಿಕ ಸಂಪರ್ಕ ಮಾಡಿದ್ದ. ನಂತರ ಮಾ.9, ಮಾ.27 ಮತ್ತು ಮಾ.28ರಂದು ಇದೇ ರೀತಿ ಬಲವಂತವಾಗಿ…

Read More

2 ಗಂಟೆ ವ್ಯಾಯಾಮ, 6 ಗಂಟೆ ನಿದ್ರೆ: 4 ವರ್ಷಗಳಲ್ಲಿ ಮಧುಮೇಹವನ್ನು ಸೋಲಿಸಿದ ಅಮಿತ್ ಶಾ

ನವದೆಹಲಿ: ವಿಶ್ವ ಯಕೃತ್ತಿನ ದಿನದಂದು ತಮ್ಮ ಗಮನಾರ್ಹ ತೂಕ ಇಳಿಸುವ ಪ್ರಯಾಣದ ಬಗ್ಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ರಾಷ್ಟ್ರದ ಯುವಕರಿಗೆ” ತಮ್ಮ ಆರೋಗ್ಯದ ಬಗ್ಗೆ ಸಕ್ರಿಯವಾಗಿ ಗಮನ ಹರಿಸಲು ಪ್ರೇರೇಪಿಸಿದರು, ಇದರಿಂದ ಅವರು “ಇನ್ನೂ 40-50 ವರ್ಷ ಬದುಕಬಹುದು ಮತ್ತು ದೇಶದ ಪ್ರಗತಿಗೆ ಕೊಡುಗೆ ನೀಡಬಹುದು ಎಂದರು. ಫಿಟ್ನೆಸ್ ಕಡೆಗೆ ತಮ್ಮ ಪ್ರಯಾಣವನ್ನು ನೆನಪಿಸಿಕೊಂಡ ಶಾ, ತಮ್ಮ ಆಹಾರಕ್ರಮವನ್ನು ಬದಲಾಯಿಸುವುದು, ನಿದ್ರೆಯ ಸಮಯವನ್ನು ಹೆಚ್ಚಿಸುವುದು ಮತ್ತು ದೈನಂದಿನ ವ್ಯಾಯಾಮ ಮಾಡುವುದು ಮಾತ್ರ ಬೇಕಾಯಿತು…

Read More

ಮೂಡುಬಿದಿರೆ: ಭೀಕರ ಅಪಘಾತ, ವಿದ್ಯಾರ್ಥಿನಿ ದಾರುಣ ಅಂತ್ಯ

ಮೂಡುಬಿದಿರೆ: ಸರ್ಕಾರಿ ಬಸ್ ಗೆ ಬೈಕೊಂದು ಢಿಕ್ಕಿ ಹೊಡೆದು ಸಹಸವಾರೆಯೊರ್ವಳು ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ, ಇಪ್ಪತ್ತು ವರ್ಷದ ನಿಕ್ಷಿತಾ ಸಾವನ್ನಪ್ಪಿದ ಯುವತಿ. ಈಕೆ ತನ್ನ ಗೆಳೆಯನೊಂದಿಗೆ ಬರುತ್ತಿದ್ದಾಗ ಈ ದುರಂತ ನಡೆದಿದೆ. ಬೆಳುವಾಯಿ ಮೂಲದ ಈಕೆ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಸವಾರನ ನಿರ್ಲಕ್ಷ್ಯದಿಂದ ಈ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗದೆ ಮೃತಪಟ್ಟಿದ್ದಾಳೆ. ಮೃತ ಯುವತಿಯ ಗೆಳೆಯ ಮಾರ್ನಾಡಿನ ರಂಜಿತ್ ವಿರುದ್ಧ…

Read More

ಬೆಳ್ತಂಗಡಿ: ಹಾಡಹಗಲೇ ಮನೆಯ ಬೀಗ ಮುರಿದು ಕಳ್ಳತನ..!!

ಬೆಳ್ತಂಗಡಿ: ಹಾಡಹಗಲೇ ಮನೆಯ ಬೀಗ ಮುರಿದು ಒಳನುಗ್ಗಿ ಸುಮಾರು ಹದಿಮೂರು ಲಕ್ಷ ಬೆಲೆಬಾಳುವ ಚಿನ್ನಾಭರಣ, ಹಣ ಕಳವು ಮಾಡಿ ಪರಾರಿಯಾದ ಘಟನೆ ಬೆಳ್ತಂಗಡಿಯ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ. ಮನೆಯ ಯಜಮಾನಿ ವಸಂತಿ ಹೆಗ್ಡೆ ಮತ್ತು ಅವರ ಮಗ-ಸೊಸೆ ಮನೆಗೆ ಬೀಗ ಹಾಕಿ ಬೆಳ್ತಂಗಡಿಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ಖದೀಮರು ಬೀಗ ಮುರಿದು ಮನೆಗೆ ನುಗ್ಗಿದ್ದಾರೆ. ಮನೆಯ ಕೋಣೆಯ ಕಪಾಟಿನಲ್ಲಿಟ್ಟಿದ್ದ ಹದಿಮೂರು ಲಕ್ಷ, ಎಪ್ಪತ್ತು ಸಾವಿರ ಬೆಲೆಬಾಳುವ ಚಿನ್ನಾಭರಣ ಮತ್ತು ಮೂವತ್ತು ಸಾವಿರ ಹಣ…

Read More

ಇನ್ನು ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ. 50 ಸೀಟುಗಳು ಮೀಸಲು

ಬೆಂಗಳೂರು: ರಾಜ್ಯ ಸರಕಾರ ಮಹಿಳೆಯರ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದ ಹೆಣ್ಣು ಮಕ್ಕಳಿಗೆ (girl Students) ಶಿಕ್ಷಣ ಇಲಾಖೆ ಶುಭ ಸುದ್ದಿ ಕೊಟ್ಟಿದ್ದು, ಇನ್ಮುಂದೆ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇಕಡಾ 50ರಷ್ಟು ಸೀಟುಗಳನ್ನು ಮೀಸಲಿಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳಿಗೂ ಕೂಡ ಅನ್ವಯವಾಗಲಿದೆ. CBSE, ICSE ಕೇಂದ್ರ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಅನ್ವಯವಾಗುವಂತೆ ಮೀಸಲಾತಿ ಜಾರಿಗೊಳಿಸಿ ಸರಕಾರ ಆದೇಶಿಸಿದೆ. ಪ್ರತೀ ತರಗತಿಯಲ್ಲಿ ಲಭ್ಯವಿರುವ…

Read More

ಪತ್ನಿಯಿಂದಲೇ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕನ ಭೀಕರ ಹತ್ಯೆ

ಬೆಂಗಳೂರು: ಪತ್ನಿಯೇ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಮೊದಲು ಓಂ ಪ್ರಕಾಶ್ ಹತ್ಯೆ ಬಗ್ಗೆ ಅವರ ಪತ್ನಿ ಮಾಹಿತಿ ನೀಡಿದ್ದರು. ಆದರೆ ತದನಂತರ ಸ್ವತಹ ಓಂ ಪ್ರಕಾಶ್ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದರು. 1981ರ…

Read More

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಕಾರು…! ಚಾಲಕನಿಗೆ ಗಂಭೀರ ಗಾಯ

ಮಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರೊಂದು ರಸ್ತೆಯ ಬದಿಗೆ ಉರುಳಿ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತ ನಡೆದ ತಕ್ಷಣ ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಯ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಸ್ತೆಯ ಬದಿಗೆ ಉರುಳಿದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳೀಯರೊಬ್ಬರ ಮಾಹಿತಿ ಪ್ರಕಾರ ಚಾಲಕನಿಗೆ ತೀವು ಸ್ವರೂಪದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

Read More