admin

ಶಿರಾಡಿ ಘಾಟಿಯಲ್ಲಿ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ರಸ್ತೆ ಹಾಗೂ ರೈಲು ಮಾರ್ಗ ಅಭಿವೃದ್ದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲು ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ದ.ಕ. ಬಾಕಿ ಉಳಿದಿರುವ ಮೂಲಸೌಕರ್ಯ ಅಭಿವೃದ್ದಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಮಹತ್ವದ…

Read More

ಮಂಗಳೂರು: ವಕ್ಫ್ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ- ರಸ್ತೆ ಸಂಚಾರ ನಿರ್ಬಂಧಿಸದಂತೆ ಹೈಕೋರ್ಟ್‌ ಸೂಚನೆ

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಏ. 18) ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಈ ವೇಳೆ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದು, ರಸ್ತೆ ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಮಂಗಳೂರಿನ ರಾಜೇಶ್ ಅರ್ಕುಳ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ….

Read More

ಉಳ್ಳಾಲ‌ ಸಾಮೂಹಿಕ ಅತ್ಯಾಚಾರ ಪ್ರಕರಣ- ಮೂವರು ಆರೋಪಿಗಳು ವಶಕ್ಕೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಮೊನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊರ ರಾಜ್ಯದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಘಟನೆಯ ಕುರಿತು ವಿವರಿಸುತ್ತಾ, “ಮೊನ್ನೆ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ 112ಗೆ ಕರೆ ಬಂದಿತ್ತು. ಕರೆ ಮಾಡಿದವರು ಹುಡುಗಿಯೊಬ್ಬಳು ಕೂಗಾಡುತ್ತಿದ್ದು, ಆಕೆಗೆ ಹಲ್ಲೆ…

Read More

ಉಳ್ಳಾಲ: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ..!! ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕ ಯುವತಿ

ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ‌ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ…

Read More

ಬಂಟ್ವಾಳ: ಕುಡಿದ ಮತ್ತಿನಲ್ಲಿ ಬೈಕ್‌ ಗೆ ಢಿಕ್ಕಿ ಹೊಡೆದ KSRTC ಬಸ್ ಡ್ರೈವರ್‌..!

ಬಂಟ್ವಾಳ: ಅಮಲು ಪದಾರ್ಥ ಸೇವಿಸಿ ಬಸ್ ಚಲಾಯಿಸಿದ ಚಾಲಕನಿಂದ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ಮುಂಜಾನೆ ವೇಳೆ ‌ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ದಿಲೀಪ್ ನದಾಫ್ ಅಪಘಾತವೆಸಗಿದ ಆರೋಪಿಯಾಗಿದ್ದು, ಗಾಯಗೊಂಡ ಬೈಕ್ ಸವಾರರನ್ನು ಮಹಮ್ಮದ್ ‌ಸುನೈಫ್, ಮಹಮ್ಮದ್ ‌ನಿಜಾಮುದ್ದೀನ್ ಎಂದು ತಿಳಿಯಲಾಗಿದೆ. ವಿಪರೀತ ಅಮಲು ಪದಾರ್ಥ ಸೇವಿಸಿ, ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕ ದಿಲೀಪ್ ನದಾಫ್ ಅವರು ತುಂಬೆಯಲ್ಲಿ ಮಂಗಳೂರು ಕಡೆಯಿಂದ ಬಿ.ಸಿರೋಡು…

Read More

ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಗವರ್ನರ್ ಗೆಹ್ಲೋಟ್

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿದ್ದಾರೆ ಎಂದು ರಾಜಭವನದ ಮೂಲಗಳು ಬುಧವಾರ ತಿಳಿಸಿವೆ. ಮೂಲಗಳ ಪ್ರಕಾರ, ಗೆಹ್ಲೋಟ್ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿರುವ ಈ ಮಸೂದೆಯನ್ನು ಈಗ ರಾಜ್ಯ ಸರ್ಕಾರ, ಅನುಮೋದನೆ ಪಡೆಯಲು ರಾಷ್ಟ್ರಪತಿಗಳಿಗೆ ಫೈಲ್ ಅನ್ನು ಕಳುಹಿಸಲಿದೆ. ವಿರೋಧ ಪಕ್ಷ…

Read More

ಮಂಗಳೂರು: ವಿವಾಹದ ಹಿಂದಿನ ದಿನ ವಧು ನಾಪತ್ತೆ..!!

ಮಂಗಳೂರು: ಯುವತಿ ವಿವಾಹದ ಹಿಂದಿನ ದಿನ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಬೋಳಾರದ ಪಲ್ಲವಿ (22) ನಾಪತ್ತೆಯಾದ ವಧು. ಈಕೆಯ ಒಪ್ಪಿಗೆಯಂತೆ ನಿಶ್ಚಿತಾರ್ಥವಾಗಿತ್ತು. ಎಪ್ರಿಲ್ 16ರಂದು ವಿವಾಹ ನಿಗದಿಯಾಗಿತ್ತು. ಎಪ್ರಿಲ್ 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲ‌್ರಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದವಳು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ…

Read More

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನೆಡೆ : ‘KPSC’ ತಿದ್ದುಪಡಿ ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು : ಈಗಾಗಲೇ ಹಲವು ವಿಧೇಯಕಗಳನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು ಇದೀಗ ಮತ್ತೊಂದು ವಿಧೇಯಕವನ್ನು ವಾಪಾಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನೆಡೆಯಾಗಿದ್ದು, ಕೆಪಿಎಸ್ಸಿಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕ ಸೇವಾ ಆಯೋಗ ತಿದ್ದುಪಡಿ -2025ನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಈ ಹಿಂದೆ ಕೆಪಿಎಸ್ಸಿಯಲ್ಲಿ ಬದಲಾವಣೆ ತರಬೇಕಾದರೂ ರಾಜ್ಯ ಸರ್ಕಾರ ಮೊದಲು ಕೆಪಿಎಸ್ಸಿಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿತ್ತು. ಕೆಪಿಎಸ್ಸಿಯನ್ನು ಸಂಪರ್ಕಿಸುವ ಅಗತ್ಯವಿಲ್ಲ ಎಂಬ…

Read More

ಮಲ್ಪೆ ಶೌಚಾಲಯದಲ್ಲಿ ಶಿಶುವಿನ ಮೃತದೇಹ ಎಸೆದ ಪ್ರಕರಣ- ತಾಯಿ ಗುರುತು ಪತ್ತೆ

ಉಡುಪಿ : ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಾಯಿಯನ್ನು ಪತ್ತೆ ಹಚ್ಚಲಾಗಿದ್ದು, ಆಕೆಯ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಮಲ್ಪೆ ಜಂಕ್ಷನ್‌ನಲ್ಲಿರುವ ಜಾಮೀಯ ಮಸೀದಿಯ ಬಳಿಯ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಎ.14ರಂದು ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಶೌಚಾಲಯದ ಒಳಗಿನ ಗೋಡೆಯ ಮೇಲೆ ರಕ್ತದ ಕಲೆಗಳು ಇರುವುದು ಕಂಡು ಬಂದಿತ್ತು. ಈ ಬಗ್ಗೆ ಮಸೀದಿಯ ವ್ಯವಸ್ಥಾಪಕರು ನೀಡಿದ…

Read More

ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ

ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವಪತ್ತೆಯಾಗಿತ್ತು‌ ಮಸೀದಿಯವರು ಪ್ರಕರಣ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ” ಎಂದರು. ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ. ಸ್ಥಳೀಯ ಯುವತಿ…

Read More