ಮಾಟ,ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ವಂಚನೆ, ಕಿರುಕುಳ- ಉಸ್ತಾದ್ ಅರೆಸ್ಟ್
ಮಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು , ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್…

