admin

ಟಿಕ್​ಟಾಕ್​ ಖರೀದಿ ತಲೆನೋವು: ಮತ್ತೆ ಗಡುವು ವಿಸ್ತರಿಸಿದ ಅಮೆರಿಕ ಅಧ್ಯಕ್ಷ!

ಅಮೆರಿಕದಲ್ಲಿ ಶಾರ್ಟ್​ ವಿಡಿಯೋ ಅಪ್ಲಿಕೇಶನ್ ಟಿಕ್‌ಟಾಕ್ ಅನ್ನು ನಿಷೇಧಿಸುವ ಗಡುವು ಪೂರ್ಣಗೊಳ್ಳುವ ಮುನ್ನವೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅಮೆರಿಕದ ಖರೀದಿದಾರರನ್ನು ಹುಡುಕಲು ಡೊನಾಲ್ಡ್ ಟ್ರಂಪ್ ಟಿಕ್‌ಟಾಕ್‌ಗೆ 75 ದಿನಗಳ ಕಾಲಾವಕಾಶ ನೀಡಿದ್ದಾರೆ. ಈ ಸಂಬಂಧ ಟ್ರಂಪ್ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಕೆಲ ದಿನಗಳ ಹಿಂದೆ ಟಿಕ್‌ಟಾಕ್ ಖರೀದಿಸಲು ಅಮೆಜಾನ್ ಪ್ರಯತ್ನಿಸಿತ್ತು ಎಂಬುದು ಗಮನಾರ್ಹ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿ, ”ಟಿಕ್‌ಟಾಕ್ ಉಳಿಸಲು ನನ್ನ ಆಡಳಿತವು…

Read More

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ..!

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಹೇಳಿದ್ದಾರೆ. ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು…

Read More

ಉಡುಪಿ: ಇಮೇಲ್ ಗೆ ಬಂದ ಲಿಂಕ್ ಒತ್ತಿ ಲಕ್ಷಾಂತರ ರೂ ಮಂಗಮಾಯ..!

ಉಡುಪಿ: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅಮಾಯಕರು ಮೋಸದ ಬಲೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಉಡುಪಿಯಲ್ಲಿ ಕೂಡಾ ಅದೇ ರೀತಿಯ ಘಟನೆ ನಡೆದಿದ್ದು ವ್ಯಕ್ತಿಯೊಬ್ಬ ಲಕ್ಷಾಂತರ ರೂ‌. ಹಣ ಕಳೆದುಕೊಂಡಿದ್ದಾನೆ. ಮೂಲತಃ ಉಡುಪಿಯ ದಿಲೀಪ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ. ಇವರಿಗೆ ನೆಟ್ಫ್ಲಿಕ್ಸ್ ನ ಚಂದಾ ಮುಗಿದು ಹೋಗಿದ್ದ ಕಾರಣ ಇಮೇಲ್ ಗೆ ಒಂದು ಮೆಸೇಜ್ ಬಂದಿತ್ತು. ನಂತರ ಲಿಂಕ್ ಕ್ಲಿಕ್ ಮಾಡಿದಾಗ ಚಂದಾ ಪಡೆಯಲು ಕ್ರೆಡಿಟ್ ಕಾರ್ಡ್ ಮಾಹಿತಿ ಪಡೆಯಲು ಇನ್ನೊಂದು…

Read More

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ..!

ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ವಾಹನವನ್ನು ಅಡ್ಡಗಟ್ಟುತ್ತಿದ್ದಂತೆ ಚಾಲಕ…

Read More

ಮಂಗಳೂರಿನಿಂದ ಬೆಂಗಳೂರಿಗೆ ಹೊಗುತ್ತಿದ್ದ ರೈಲಿನಲ್ಲಿ ಜನರಲ್ ಬೋಗಿಯಿಂದ ಬಿದ್ದ ಪ್ರಯಾಣಿಕ..!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ  ಯುವಕನೋರ್ವ  ಬಿದ್ದು ಗಾಯಗೊಂಡು ನರಳುತ್ತಿದ್ದ ಪ್ರಯಾಣಿಕರೋರ್ವರನ್ನು ರೈಲ್ವೇ ಲೈನ್ ಬೀಟ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಸಕಲೇಶಪುರ ನಿವಾಸಿ ಉಮೇಶ್ ಎಂಬವರು ಗಾಯಗೊಂಡವರು. ಅವರು ಮಂಗಳೂರಿನಿಂದ ಬೆಂಗಳೂರಿಗೆ ಹೊಗುತ್ತಿದ್ದ ರೈಲಿನಲ್ಲಿ ಜನರಲ್ ಬೋಗಿಯಲ್ಲಿ ಸಕಲೇಶಪುರಕ್ಕೆ ಪ್ರಯಾಣಿಸುತ್ತಿದ್ದರು. ದಾರಿ ಮಧ್ಯೆ ನರಿಮೊಗರು ಸಮೀಪ ಅವರು ರೈಲಿನಿಂದ ಆಯ ತಪ್ಪಿ ಬಿದಿದ್ದಾರೆ. ಆದರೆ ತೀವ್ರ ಗಾಯಗೊಂಡ ಅವರು ರೈಲ್ವೇ ಹಳಿಯ ಪಕ್ಕದಲ್ಲಿರುವ ಕಲ್ಲಿನ ಕಂಬದ ಪಕ್ಕ ನರಳಾಡುತ್ತಿದ್ದರು. ಬೆಳಗ್ಗೆ ಕರ್ತವ್ಯ ನಿರತ ಕಬಕ…

Read More

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಉಪ್ಪಿನಂಗಡಿ ಬಳಿ ಪಲ್ಟಿ..! ಓರ್ವ ಸಾವು

ಪುತ್ತೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ 5 ಗಂಟೆಗೆ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಗ್ರಾಮಾಂತರದ ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮಂಗಳೂರು ಹೊರವಲಯದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ…

Read More

ಉಡುಪಿ: ಟೈಮಿಂಗ್‌ ವಿಚಾರಕ್ಕೆ ಕಂಡಕ್ಟರ್ ಹಾಗೂ ಡ್ರೈವರ್ ಬಸ್‌ ನಿಲ್ದಾಣದಲ್ಲಿ ರಾಡ್ ಹಿಡಿದು ಹೊಡೆದಾಟ..! ವಿಡಿಯೋ ವೈರಲ್‌

ಉಡುಪಿ: ಟೈಮಿಂಗ್‌ ವಿಚಾರಕ್ಕೆ ಕಂಡಕ್ಟರ್ ಹಾಗೂ ಡ್ರೈವರ್ ಬಸ್‌ ನಿಲ್ದಾಣದಲ್ಲಿ ರಾಡ್ ಹಿಡಿದು ಹೊಡೆದಾಟ..! ವಿಡಿಯೋ ವೈರಲ್‌ ನಗರದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌ ನ ಕಂಡಕ್ಟರ್‌ ವಿಜಯ…

Read More

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ- ಮಗುವಿನ ಹೆತ್ತವರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು..!

ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ಕೊಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದ್ದು, ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ…

Read More

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ ಇವರಿಗೆ ಈ ಭಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಎಪ್ರಿಲ್ 2 ರಂದು ಕರ್ನಾಟಕ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗರ ಪ್ರಥಮ ಪುತ್ರ…

Read More

ಕಿಸ್ ಗೆ 50 ಸಾವಿರ: ಹನಿಟ್ರ್ಯಾಪ್ ಮಾಡುತ್ತಿದ್ದ ಶಿಕ್ಷಕಿ & ಗ್ಯಾಂಗ್ ಅಂದರ್..!

ಬೆಂಗಳೂರಿನಲ್ಲಿ ಪೋಷಕರಿಗೆ ಹನಿಟ್ರ್ಯಾಪ್ ಮಾಡುತ್ತಿದ್ದ ಶಿಕ್ಷಕಿಯೋರ್ವಳು ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾಳೆ. ಬಂಧಿತಳನ್ನು ಶಿಕ್ಷಕಿ ಶ್ರೀದೇವಿ ಎಂದು ಗುರುತಿಸಲಾಗಿದೆ. ಶ್ರೀದೇವಿ ಜೊತೆ ಇಬ್ಬರು ಆರೋಪಿಗಳನ್ನು ಕೂಡ ಬಂಧಿಸಲಾಗಿದೆ. ಪೋಷಕರಿಗೆ ಹನಿಟ್ರ್ಯಾಪ್ ಗಾಳ ಹಾಕಿದ ಶಿಕ್ಷಕಿ.!ಬಂಧಿತಳನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀದೇವಿ ರುಡಿಗಿಗೆ 2023 ರಲ್ಲಿ ರಾಕೇಶ್ ಎಂಬ ಪೋಷಕನ ಪರಿಚಯವಾಗಿತ್ತು. ರಾಕೇಶ್ನಿಂದ ಶಾಲೆ ನಿರ್ವಹಣೆ, ತಂದೆಯ ಚಿಕಿತ್ಸೆಗಂತ ಶ್ರೀದೇವಿ 4 ಲಕ್ಷ ರೂ. ಹಣವನ್ನು ಸಾಲವಾಗಿ ಪಡೆದಿದ್ದಳು….

Read More