admin

ಹೈಕಮ್ಯಾಂಡ್ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದು ಖಚಿತ: ಮುಂದಿನ ಮುಖ್ಯಮಂತ್ರಿ ನಾನೇ- ಯತ್ನಾಳ್

ಬಿಜೆಪಿ ಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ವೈ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಪರ ಲಿಂಗಾಯತರು ಇಲ್ಲ. ಜನರೇ ಹೊಸ ಪಕ್ಷ ಕಟ್ಟೋಕೆ ಸಲಹೆ ನೀಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಲ್ಲಿ ಮಾತಾಡಿದ ಅವರು, ಯುಗಾದಿ ಕಳೆದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ಅಂತ್ಯಗೊಳ್ಳಲಿದ್ದು ನನ್ನನ್ನು ಹೈಕಮ್ಯಾಂಡ್ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದು ಖಚಿತ ಎಂದು ನುಡಿದ ಯತ್ನಾಳ್, 2028 ಕ್ಕೆ ನಾನು ಸಿಎಂ ಆಗುವುದು ಪಕ್ಕಾ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ…

Read More

ಮಂಗಳೂರು : ಗಾಂಜಾ ಮಾರಾಟ- ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾದಕ ವಸ್ತು ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬಂಟ್ವಾಳ ಬೋಳಂಗಡಿ ನಿವಾಸಿ ರೋಯಸ್ಸನ್ ಕ್ಷೇವಿಯರ್ ಲೋಬೋ(22) ಎಂದು ಗುರುತಿಸಲಾಗಿದೆ. ಬಂಧಿತರಿಂದ 9 ಲಕ್ಷ ಮೌಲ್ಯದ ಹೈಡೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿದ್ದಾರೆ. ಬೆಂಗಳೂರಿನಿಂದ ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿ ಮಂಗಳೂರು ನಗರದಲ್ಲಿ…

Read More

ಕಾರ್ಕಳ: ಪರೀಕ್ಷೆಯಲ್ಲಿ ಅನುತ್ತೀರ್ಣ- ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ..!

ಕಾರ್ಕಳ: ಕಳೆದ ವರ್ಷ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದು, ನಂತರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಬರೆದಿದ್ದರೂ ಅನುತ್ತೀರ್ಣಗೊಂಡ ಕಾರಣ ಜೀವನದಲ್ಲಿ ಜಿಗುಪ್ಪೆಗೊಂಡು ವಿದ್ಯಾರ್ಥಿ ತೇಜಸ್‌ (17 )ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜಿಕಾರಿನಲ್ಲಿ ಸಂಭವಿಸಿದೆ. ಕಳೆದ ವರ್ಷ ಎಸ್ಸೆಎಸ್ಸೆಲ್ಸಿ ಪರೀಕ್ಷೆ ಮತ್ತು ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಜಿಗುಪ್ಪೆಗೊಂಡ ವಿದ್ಯಾರ್ಥಿ ತೇಜಸ್‌ ಮನೆಯಿಂದ ಸ್ವಲ್ಪ ದೂರದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ತಂದೆ ರಮೇಶ ಮಂಜರಬೆಟ್ಟು ಅವರು ನೀಡಿದ ದೂರಿನಂತೆ ಅಜಿಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಾಲಾ ವಾಹನಕ್ಕೆ ಕಾರು ಡಿಕ್ಕಿ..!! ಇಬ್ಬರಿಗೆ ಗಾಯ

ಉಡುಪಿ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದ ಸಮೀಪ ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಇಕೋ ಕಾರು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಇಕೋ ಕಾರ್ ನಲ್ಲಿದ್ದ ತಂದೆ ಮಗ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು….

Read More

ಉಡುಪಿ: ಲವ್ ಜಿಹಾದ್ ಪ್ರಕರಣ -ದೂರು ದಾಖಲು..!!

ಉಡುಪಿ : ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿ ಸುತ್ತಿದ್ದಂತೆ ಮೊಹಮ್ಮದ್ ಅಕ್ರಮ್ ಉಡುಪಿ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ. ಯುವತಿ…

Read More

ಮೂಡುಬಿದಿರೆ: ಅಕ್ರಮ ದನ ‌ಸಾಗಾಟದ ಆರೋಪ – ಇಬ್ಬರ ಮೇಲೆ ಹಲ್ಲೆ

ಮೂಡುಬಿದಿರೆ: ಅಕ್ರಮ ದನ‌ಸಾಗಾಟದ ಆರೋಪದಲ್ಲಿ ಬಜರಂಗದಳ‌ ಕಾರ್ಯಕರ್ತರು ಇಬ್ಬರಿಗೆ ಗಂಭೀರ ಹಲ್ಲೆ ನಡೆಸಿರುವ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳುವಾಯಿಯಲ್ಲಿ ಸಂಭವಿಸಿದೆ. ಮೂಡುಬಿದಿರೆ ಮೂಲದ ಅಬ್ದುಲ್ ರಹಿಮಾನ್ ಮತ್ತು ಕೂಸಪ್ಪ ಪೂಜಾರಿ ಗಂಭೀರವಾಗಿ ಹಲ್ಲೆಗೀಡಾದವರು ಎಂದು ತಿಳಿಯಲಾಗಿದೆ. ಅವರನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಬ್ದುಲ್ ರಹಿಮಾನ್ ಮತ್ತು ಕೂಸಪ್ಪ ಅವರು ಹೈಬ್ರೀಡ್ ಹಸುವನ್ನು ಕೃತಕ ಗರ್ಭಧಾರಣೆಗೆಂದು ವಾಹನವೊಂದರಲ್ಲಿ ಕಾರ್ಕಳದ ತಮ್ಮ ಪರಿಚಯದವರ ಮನೆಯಿಂದ ಮೂಡುಬಿದಿರೆಗೆ ತರುವಾಗ ಬೆಳುವಾಯಿ ಎಂಬಲ್ಲಿ ವಾಹನಕ್ಕೆ ಅಡ್ಡಗಟ್ಟಿದ ಬಜರಂಗದಳದ ಕಾರ್ಯಕರ್ತರು…

Read More

ಬಂಟ್ವಾಳ: ಬಸ್ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ನಾವೂರು‌ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಮೋನು ಅರೆಸ್ಟ್

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಆರೋಪಿಯು ನಾವೂರು‌ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ತಿಳಿಯಲಾಗಿದೆ. ಆರೋಪಿಯನ್ನು ಸ್ಥಳೀಯರು‌ ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಆರೋಪಿ ಮೋನು ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಟ್ವಾಳ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಳ್ತಂಗಡಿ: ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ..! 100 ಪರ್ಸೆಂಟ್‌ ಫಲಿತಾಂಶಕ್ಕಾಗಿ SSLC ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು

ಬೆಳ್ತಂಗಡಿ: ಕರ್ನಾಟಕದಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್‌ ರಿಸಲ್ಟ್‌ಗಾಗಿ ಆಸೆಗೆ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶವೇ ಕೊಟ್ಟಿಲ್ಲವಂತೆ. ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯೊಂದು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ….

Read More

ಮಂಗಳೂರು: ಅಕ್ರಮ ಗೋಸಾಗಾಟ..! ‌ಹಿಂದೂ ಕಾರ್ಯಕರ್ತರ ಭರ್ಜರಿ ಬೇಟೆ- 25 ಗೋವುಗಳ ರಕ್ಷಣೆ

ಮಂಗಳೂರು: ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಮತ್ತೆ ಭಜರಂಗದಳ ಕಾರ್ಯಕರ್ತರು ಅದನ್ನು ತಡೆದು ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಇಂದು ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು…

Read More

ಪುತ್ತೂರು: ಮಹಿಳೆ ಮೇಲೆ ತಲ್ವಾರಿನಿಂದ ಹಲ್ಲೆಗೆ ಯತ್ನ..!

ಪುತ್ತೂರು: ಮಹಿಳೆ ಮೇಲೆ ತಲ್ವಾರ್ ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ಸಂಪ್ಯದ ಮೂಲೆ ಎಂಬಲ್ಲಿ ನಡೆದಿದೆ. ಹಸೈನಾರ್ ಎಂಬಾತ ಸಂಪ್ಯದಮೂಲೆ ನಿವಾಸಿ ರೇಖನಾಥ್‍ ರೈ ಅವರ ಸಹೋದರಿ ಪುಷ್ಪಾವತಿ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Read More