ಪ್ರಚೋದನಕಾರಿ ಭಾಷಣ: ಮಂಜು ಕೊಳ ವಿರುದ್ಧ ಸುಮೋಟೋ ಕೇಸ್ ..!
ಉಡುಪಿ: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾ.22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು ಕೊಳ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿ ಸಭೆಯಲ್ಲಿ ಮಾತನಾಡಿದ್ದ ಮಂಜು ಕೊಳ, ಗಂಗೊಳ್ಳಿಯ ಒಂದು ಘಟನೆ ನೆನಪಿಟ್ಟುಕೊಳ್ಳಿ ಎಂದು ಇದೇ ಎಸ್ಪಿಗೆ ಹೇಳುತ್ತೇನೆ. ಒಬ್ಬ ಮೀನುಗಾರನನ್ನು ಒಳಗೆ ಹಾಕಿದರು. ಅದಕ್ಕೆ 10,000 ಜನ…

