admin

ಮಂಗಳೂರು: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR..!

ಮಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ ಪ್ರಚೋದನೆ ಅಡಿಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 9ರಂದು VHP ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ಸೂಲಿಬೆಲೆ ಅವರು, ಅನ್ಯ ಧರ್ಮಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಕರೆ ನೀಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು. ಈ ಸಂಬಂಧ ಇದೀಗ…

Read More

67 ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಟ್ಟಿ ನವೀಕರಿಸಿದ ಗೃಹ ಸಚಿವಾಲಯ

ನವದೆಹಲಿ: ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ನಿಷೇಧವನ್ನು ಎದುರಿಸುತ್ತಿರುವ 67 ಭಯೋತ್ಪಾದಕ ಸಂಘಟನೆಗಳು ಮತ್ತು ಕಾನೂನುಬಾಹಿರ ಸಂಘಗಳ ಗುಂಪನ್ನು ಗೃಹ ಸಚಿವಾಲಯದ (Home Ministry) ನವೀಕರಿಸಿದ ಪಟ್ಟಿಯಲ್ಲಿ ಹೆಸರಿಸಲಾಗಿದೆ. ಗೃಹ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಯುಎಪಿಎ ಸೆಕ್ಷನ್ 35 ರ ಅಡಿಯಲ್ಲಿ ಅಧಿಕೃತವಾಗಿ ಭಯೋತ್ಪಾದಕ ಸಂಘಟನೆಗಳು ಎಂದು ವರ್ಗೀಕರಿಸಲಾದ ಮತ್ತು ಕಾಯ್ದೆಯ ಮೊದಲ ಶೆಡ್ಯೂಲ್‌ನಲ್ಲಿ ಸೇರಿಸಲಾದ 45 ಸಂಘಟನೆಗಳ ಹೆಸರುಗಳಿವೆ. ಉಳಿದ 22 ಗುಂಪುಗಳನ್ನು ಯುಎಪಿಎ ಸೆಕ್ಷನ್ 3…

Read More

ಮಂಗಳೂರು: ಮ್ಯಾನೇಜರ್‌ನಿಂದಲೇ ಬ್ಯಾಂಕ್‌ಗೆ ವಂಚನೆ..!

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ. ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ 2024ರ ಫೆಬ್ರವರಿ 7ರವರೆಗೆ ಮ್ಯಾನೇಜರ್‌ ಆಗಿದ್ದು, ಈ ಸಂದರ್ಭ ಬ್ಯಾಂಕಿನ ಹಿರಿಯ ನಾಗರಿಕರು ಠೇವಣಿಯಲ್ಲಿರಿಸಿದ್ದ ಹಣವನ್ನು ಖಾತೆದಾರರಿಗೆ ತಿಳಿಯದಂತೆ 1, 44, 71, 000 ರೂ. ವನ್ನು ಸಾಲ ರೂಪದಲ್ಲಿ ಇತರ ಆರೋಪಿತರ ಖಾತೆಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ.

Read More

ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಆಸ್ತಿ, ಉಯಿಲು ರದ್ದು: ರಾಜ್ಯ ಸರ್ಕಾರ

ಬೆಂಗಳೂರು: ವಯಸ್ಸಾದ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ಕರೆತಂದು ಮಕ್ಕಳು ಬಿಟ್ಟು ನಾಪತ್ತೆಯಾಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಲಹದೇ ಈ ರೀತಿ ಅಮಾನವೀಯರಾಗಿ ನಡೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಮಕ್ಕಳ ಹೆಸರಿಗೆ ಬರೆದಿರುವಂತ ಆಸ್ತಿ, ಉಯಿಲು ರದ್ದು ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂಧಿದೆ.  ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ…

Read More

ಮಂಗಳೂರು: ವಿಚಾರಣಾಧೀನ ಕೈದಿಯೊಬ್ಬ ಕಾರಾಗೃಹದಲ್ಲಿ ಆತ್ಮಹತ್ಯೆ

ಮಂಗಳೂರು: ಮಂಗಳೂರು ನಗರದ ಕಾರಾಗೃಹದಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಪ್ರಕಾಶ ಗೋಪಾಲ್ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡ ಕೈದಿ ಎಂದು ತಿಳಿಯಲಾಗಿದೆ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ. ಇಂದು ಜೈಲಿನ ಶೌಚಾಲಯದ ಕಿಟಕಿ ಗ್ರಿಲ್‌ಗೆ ಟವಲ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾ.11 ರಂದು ಪ್ರಕಾಶ್ ಗೋಪಾಲ್ ಮೂಲ್ಯನನ್ನು ಮೂಡಬಿದ್ರೆಯಲ್ಲಿ ಪೊಲೀಸರು ಬಂಧಿಸಿದ್ದರು. ನೆರೆ ಮನೆಯ 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನವಾಗಿದ್ದ. ಜೈಲಿಗೆ ಬರ್ಕೆ…

Read More

ಮಂಗಳೂರು: ಹಿಂದೂ ಯುವತಿಯೊಂದಿಗಿದ್ದ ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿತ ಪ್ರಕರಣ- 19ಮಂದಿ‌ ಆರೋಪಿಗಳು ಖುಲಾಸೆ

ಮಂಗಳೂರು: ಹಿಂದೂ ಯುವತಿಯೊಂದಿಗಿದ್ದ ಎಂದು ಮುಸ್ಲಿಂ ಯುವಕನನ್ನು ಕಾರಿನಿಂದೆಳೆದು ಹಲ್ಲೆಗೈದು ಅರೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅತ್ತಾವರದ ಈಝೀ ಡೇ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಶಾಕೀರ್ ಎಂಬಾತ ಕಾರಿನಲ್ಲಿ ಹೋಗುತ್ತಿದ್ದ. ಈತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದಾನೆಂದು ಆರೋಪಿಸಿ…

Read More

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷಗಳ ಕಠಿಣ ಸಜೆ

ಮಂಗಳೂರು: ನಗರದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -2 ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮುಲ್ಕಿ ತಾಲೂಕು ಏಳಿಂಜೆ ನಿವಾಸಿ ರವಿ (35) ಶಿಕ್ಷೆಗೊಳಗಾದ ಆರೋಪಿ ಎಂದು ತಿಳಿಯಲಾಗಿದೆ. ಈತ 2023ರ ಜೂನ್ ತಿಂಗಳಿನಿಂದ ಡಿಸೆಂಬರ್‌ವರೆಗೆ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈ…

Read More

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ…!ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಜಾಲ ಪತ್ತೆ

ಮಂಗಳೂರು : ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ರಾಜಧಾನಿ ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿದ್ದಾರೆ. ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಐದು ತಿಂಗಳಿಂದ ಕಾರ್ಯಾಚರಣೆ ನಡೆಸಿ ಡ್ರಗ್ಸ್​ ಜಾಲ ಭೇದಿಸಿದ್ದಾರೆ. ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್​ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ 100 ಕೆಜಿ…

Read More

‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮಾ.31 ಕೊನೆಯ ದಿನ.!

: ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ…

Read More

ಮಂಗಳೂರು: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಬಾಲಕ ಸಾವು..!

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ಬಾಲಕ ಮೃತಪಟ್ಟ ಘಟನೆ ಮಂಗಳೂರಿನ ನಗರದ ಮೇರಿಹಿಲ್ ನಲ್ಲಿ ನಡೆದಿದೆ. ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಸಮರ್ಜಿತ್ (12) ಮೃತ ಬಾಲಕ.‌ ಶನಿವಾರ ಮುಂಜಾನೆ ಯಾವುದೋ ಕಾರಣಕ್ಕೆ ಸ್ನೇಹಿತರೊಂದಿಗೆ ವಸತಿ ಸಮುಚ್ಚಯದ ಮಹಡಿಗೆ ತೆರಳಿದ್ದು, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು‌ ಮೃತಪಟ್ಟಿದ್ದಾನೆ.

Read More