admin

ಮಂಗಳೂರು: ಅಕ್ರಮ ಗೋಮಾಂಸ ಸಾಗಾಟ ಪತ್ತೆ..! ಸ್ಕೂಟರ್ ಬಿಟ್ಟು ಸವಾರ ಪರಾರಿ

ಮಂಗಳೂರು: ಭಜರಂಗದಳ ಕಾರ್ಯಕರ್ತರ ಕಾರ್ಯಚರಣೆಯಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾದ ಘಟನೆ ಕುಲಶೇಖರದ ಕೈಕಂಬ ಬಳಿ ನಡೆದಿದೆ. ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಸ್ಕೂಟರ್ ಅನ್ನು ಭಜರಂಗದಳ ಕಾರ್ಯಕರ್ತರು ತಡೆದಿದ್ದು, ಸವಾರ ವಾಹನ ಮತ್ತು ಸರಕನ್ನು ಬಿಟ್ಟು ಪರಾರಿಯಾಗಿದ್ದಾನೆ. ಸುಮಾರು 200 ಕೆಜಿ ಗೋಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದಾಗ, ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಂಸವನ್ನು ವಶಪಡಿಸಿಕೊಂಡರು. ಪ್ರಕರಣ ದಾಖಲಾಗಿದ್ದು, ಸವಾರನನ್ನು ಪತ್ತೆಹಚ್ಚಲು ಮತ್ತು ಗೋಮಾಂಸದ ಮೂಲವನ್ನು ತಿಳಿಯಲು ತನಿಖೆ ನಡೆಯುತ್ತಿದೆ.ಅಧಿಕಾರಿಗಳು…

Read More

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ

ಬೆಂಗಳೂರು : ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತುಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಿಳಿಸಿದರು. ಪ್ರಜಾಸತ್ತಾತ್ಮಕ ವ್ಯವಸ್ಥೆ ಬಲಪಡಿಸುವ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತಾಗಬೇಕು ಎಂದು ಆಶಿಸಿದ್ದಾರೆ. ತಮಿಳುನಾಡು ಬಜೆಟ್‌ನಲ್ಲಿ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರ ‘ರೂ’ ನೊಂದಿಗೆ ಬದಲಾಯಿಸುವ ಡಿಎಂಕೆ ನಿರ್ಧಾರವನ್ನು ಉಲ್ಲೇಖಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ‘ಒಂದು ರಾಷ್ಟ್ರ, ಒಂದು…

Read More

ಮಂಗಳೂರು: ಕೋಸ್ಟ್ ಗಾರ್ಡ್ ಅಧಿಕಾರಿಯ ಪುತ್ರ ನಾಪತ್ತೆ!

ಮಂಗಳೂರು: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ 10ಕ್ಕೆ ಮನೆಯಿಂದ ಹೋಗಿದ್ದು, ತನ್ನ ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾರೆ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ಪಶ್ಚಿಮ ಬಂಗಾಲ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ಗೋಪಿಬಲ್ಲವ್…

Read More

ಮಂಗಳೂರು: ಕೊಲೆ ಯತ್ನ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು: ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಮಹಿಳೆಯು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ. ಪೊಲೀಸರು…

Read More

ಮಂಗಳೂರು: ಕೊಲ್ಲುವ ಉದ್ದೇಶದಿಂದ ಬೈಕ್ ಸವಾರನಿಗೆ ಕಾರಿನಿಂದ ಡಿಕ್ಕಿ..! ಪಾದಾಚಾರಿ ಮಹಿಳೆಗೆ ಗಾಯ

ಮಂಗಳೂರು: ನೆರೆಮನೆಯವರನ್ನು ಕೊಲ್ಲುವ ಉದ್ದೇಶದಿಂದ ಕಾರಿನಿಂದ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ರಸ್ತೆಯ ಬದಿಯ ಕಾಂಪೌಂಡ್ ಗೋಡೆಯ ಮೇಲೆ ತಲೆಕೆಳಗಾಗಿ ನೇತಾಡಿದ ಆಘಾತಕಾರಿ ಘಟನೆ ನಗರದ ಬಿಜೈ ಕಾಪಿಕಾಡ್‌ನ ಆರನೇ ರಸ್ತೆಯಲ್ಲಿ ನಡೆದಿದೆ. ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿವೃತ್ತ ಬಿಎಸ್‌ಎನ್‌ಎಲ್ ಉದ್ಯೋಗಿ ಸತೀಶ್ ಕುಮಾರ್ ಕೆ.ಎಂ. ಮತ್ತು ನೆರೆಮನೆಯ ನಿವಾಸಿ ಮುರಳಿ ಪ್ರಸಾದ್ ನಡುವೆ ದೀರ್ಘಕಾಲದಿಂದ ದ್ವೇಷವಿತ್ತು. ಸತೀಶ್ ಕುಮಾರ್ ಕೆ.ಎಂ. ಪದೇ ಪದೇ ಮುರಳಿ ಪ್ರಸಾದ್ ಅವರೊಂದಿಗೆ ಜಗಳವಾಡುತ್ತಿದ್ದರು….

Read More

ತುಳು ಚಿತ್ರರಂಗದಲ್ಲಿ ಮಿಂಚಿದ್ದ ಕಲಾವಿದ ವಿವೇಕ್‌ ಮಾಡೂರು ಹೃದಯಾಘಾತಕ್ಕೆ ಸಾವು!

ಉಳ್ಳಾಲ: ತುಳು ಚಿತ್ರರಂಗದಲ್ಲಿ ತನ್ನ ನಟನೆಯ ಮೂಲಕ, ಕುಬ್ಜ ದೇಹದಿಂದಲೇ ಕಲಾ ರಸಿಕರನ್ನು ರಂಜನೆ ಮಾಡುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್‌ ಮಾಡೂರು (52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿರುವ ವರದಿಯಾಗಿದೆ. ನಿನ್ನೆ ರಾತ್ರಿ ತಮ್ಮ ಮನೆಯ ಶೌಚಾಲಯದಲ್ಲಿ ಏಕಾ ಏಕಿ ಬಿದ್ದಿದ್ದ ವಿವೇಕ್‌ ಅವರು ನಂತರ ನಿದ್ದೆಗೆ ಜಾರಿ ವಿಶ್ರಾಂತಿ ಪಡೆದಿದ್ದಾರೆ. ಬೆಳಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತ ಹೊಂದಿರುವುದು ತಿಳಿದು ಬಂದಿದೆ. ಟೆಲಿಫೋನ್‌ ಎಸ್‌ಟಿಡಿ ಬೂತ್‌ ನಡೆಸುತ್ತಿದ್ದ ವಿವೇಕ್‌ ಅವರು…

Read More

ಮಂಗಳೂರು: ನಾಪತ್ತೆಯಾದ ವಿದ್ಯಾರ್ಥಿ ನಿತೇಶ್‌ ಬೆಳ್ಚಾಡ  ಪತ್ತೆ

ಮಂಗಳೂರು :  ಪ್ಯಾರಾಮೆಡಿಕಲ್ ವಿದ್ಯಾರ್ಥಿ ನಿತೇಶ್‌ ಬೆಳ್ಚಾಡ  ಸುಮಾರು  ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ. ಮೂಡುಪೆರಾರ ನಿವಾಸಿ ನಿತೇಶ್ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಫೆಬ್ರವರಿ 13 ಕ್ಕೆ ನಾಪತ್ತೆಯಾಗಿದ್ದ ಈತನ ಸುಳಿವಿಗೆ ಪೊಲೀಸರು ವಿಶೇಷ ತಂಡ ರಚಿಸಿ ಅನೇಕ ಕಡೆ ತನಿಖೆ ನಡೆಸಿದ್ದರು ಮಾಹಿತಿ ಲಭಿಸಿರಲಿಲ್ಲ. ಆದರೆ ನಿತೇಶ್‍ ಎಂಬವನು ಗೋವಾದಲ್ಲಿ ಸಿಕ್ಕಿದ್ದಾನೆ ಎನ್ನಲಾಗಿದೆ.

Read More

ಮೂಡುಬಿದ್ರೆ: ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ,ಅಪರಾಧಿ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮೂಡುಬಿದ್ರೆ ತಾಲ್ಲೂಕು ವಾಲ್ಪಡಿ ಗ್ರಾಮದ ಉಮೇಶ್‌ ಶೆಟ್ಟಿ ಎಂಬಾತನನ್ನು ನ್ಯಾಯಾಲಯ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವುದು ಮಾತ್ರವಲ್ಲದೆ ಅತ್ಯಾಚಾರ ಮಾಡಿರುವ ಕಾರಣದಿಂದಾಗಿ ಬಾಲಕಿ ಗರ್ಭಿಣಿ ಆಗಿ ಮಗುವಿಗೆ ಜನ್ಮ ನೀಡಿದ ಆರೋಪ ಕೂಡ ದಾಖಲಾಗಿತ್ತು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆರೋಗ್ಯ ಮೇಲಿನ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದೆ ಎಂದು ತೀರ್ಮಾನಿಸಿ…

Read More

ಇಂದು ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ನಮ್ಮ ಹಬ್ಬಗಳಲ್ಲಿ ಪ್ರಕೃತಿಯನ್ನಾಧರಿಸಿ ಮಾಡುವ ಹಬ್ಬಗಳೇ ಹೆಚ್ಚು. ಅವುಗಳಲ್ಲಿ ಒಂದು ಹೋಲಿ ಅಥವಾ ವಸಂತೋತ್ಸವ. ಈ ಹೋಲಿಗಿಂತ ಮೊದಲು ಮಲೆನಾಡು ಮತ್ತು ಕರಾವಳಿಯ ಉತ್ತರ ಭಾಗದಲ್ಲಿ ಸುಗ್ಗಿಕುಣಿತ ಎಂಬುದಾಗಿ ಹಾಲಕ್ಕಿಸಮಾಜದವರು ನಡೆಸುತ್ತಾರೆ. ಇದೊಂದು ಜಾನಪದ ಸಂಪ್ರದಾಯ. ಸಾಮಾನ್ಯವಾಗಿ ಒಂದು ಸಲದ ಬೆಳೆ ಮುಗಿದು ಎರಡೆನೇಯ ಬೆಳೆಯ ಆರಂಭಕ್ಕೂ ಮುನ್ನ ಈ ಆಚರಣೆ ಮಾಡುತ್ತಾರೆ. ನಾನಾ ವಿಧವಾದ ಪಾರಂಪರಿಕ ವೇಷಗಳನ್ನು ಧರಿಸಿ ಮನೆ ಮನೆಗೂ ತಿರುಗುತ್ತಾ ಸಂತೋಷವೃದ್ಧಿಯನ್ನು ಮಾಡುತ್ತಾರೆ. ದುಡಿದು ದಣಿದ ರೈತನಿಗೆ ಇದು ಆನಂದವನ್ನು ನೀಡುತ್ತದೆ. ಹೋಳಿ ಹಬ್ಬದ ಮಹತ್ವ…

Read More

ಉಪ್ಪಿನಂಗಡಿ: ಕೆ.ಎಸ್‌.ಆರ್‌.ಟಿ.ಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

ಉಪ್ಪಿನಂಗಡಿ: ಕೆ.ಎಸ್‌.ಆರ್‌.ಟಿ.ಸಿ ಬಸ್ ಹಾಗೂ ಲಾರಿಯು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಬಳಿ ಸಂಭವಿಸಿದೆ. ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ತಿರುವು ಪಡೆದು ಬಸ್‍ನಿಲ್ದಾಣಕ್ಕೆಂದು ಅಂಡರ್‌ಪಾಸ್‌ನಿಂದ ತುಸು ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಹಾಸನ ಕಡೆಗೆ ಸರ್ವೀಸ್ ರಸ್ತೆ ಮೂಲಕ ಬರುತ್ತಿದ್ದ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಮುದಾಸ್ಸೀರ್ (20) , ಅಜ್ಮಲ್…

Read More