admin

ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್!

ಧರ್ಮಸ್ಥಳ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ಬಸ್ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ.

Read More

ಐಡಿಬಿಐ ಬ್ಯಾಂಕಿನಲ್ಲಿ 650 ಜೂನಿಯರ್‌ ಅಸಿಸ್ಟೆಂಟ್‌ಮ್ಯಾನೇಜರ್‌ ಹುದ್ದೆಗಳಿಗೆ ನೇಮಕಾತಿ

ಐಡಿಬಿಐ ಬ್ಯಾಂಕಿನಲ್ಲಿ 650 ಜೂನಿಯರ್‌ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕಂಪ್ಯೂಟರ್‌ ಸೈನ್ಸ್‌ನಲ್ಲಿ ಪದವಿ ಪೂರ್ಣಗೊಳಿಸಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರುಅರ್ಹರು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು 250 ರೂ. ಮತ್ತು ಇತರರು 1,050 ರೂ. ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು. ನೀವು ಮಾರ್ಚ್‌ 1 ರಿಂದ 12 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು https://www.idbibank.in/ ವೆಬ್‌ಸೈಟ್‌ಗೆ ಭೇಟಿ ನೀಡಿ.

Read More

ಪುರುಷರಿಗೂ ಕೆ.ಎಸ್‌.ಆರ್‌.ಟಿ.ಸಿ ಯಲ್ಲಿ ಉಚಿತ ಪ್ರಯಾಣ..! – ಸಿದ್ದರಾಮಯ್ಯನಿಗೆ ಯುಟಿ ಖಾದರ್‌ ಪತ್ರ!

ಮಂಗಳೂರು : ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವಂತಹ ‘ಶಕ್ತಿ ಯೋಜನೆ’ ಕೂಡ ಒಂದಾಗಿದೆ. ಇದು ಜಾರಿಯಾದ ಬಳಿಕ ಬಸ್ಸಿನಲ್ಲಿ ಪೂರ್ತಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಪುರುಷರಿಗೆ ನಿಲ್ಲಲೂ ಜಾಗ ಇರದಂತಹ ದುರಂತ ಎದುರಾಗುತ್ತಿದೆ. ಈ ಹಿನ್ನೆಲೆ ಪುರುಷರಿಗೂ ಕೂಡ ಉಚಿತ ಪ್ರಯಾಣ ನೀಡಬೇಕೆಂದು ಹಲವರು ಆಗ್ರಹಿಸಿದ್ದರು. ಈ ಕುರಿತು ಇದೀಗ ಸರ್ಕಾರ ಸದ್ಯದಲ್ಲೇ ಶುಭ ಸುದ್ದಿ ನೀಡುವ ಸೂಚನೆ ದೊರಕುತ್ತಿದೆ.ರಾಜ್ಯ ಸರ್ಕಾರ…

Read More

ಫರಂಗಿಪೇಟೆ – ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಾಪತ್ತೆ

ಮಂಗಳೂರು: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಆತ ಫೆ. 25ರಂದು ಸಂಜೆ ದೇವಸ್ಥಾನಕ್ಕೆ ಹೋಗಿವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿಯಲ್ಲಿ ಬಿದ್ದು ಕೊಂಡಿರುವುದು ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಿಸಿಗಾಳಿಯ ಭೀತಿ: ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್

ಉಡುಪಿ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ/ ಯಲ್ಲೋ ಎಚ್ಚರಿಕೆಯನ್ನು ನೀಡಿದ್ದು, ತಾಪಮಾನದಲ್ಲಿ ಗಣನೀಯ ಏರಿಕೆಯಾಗುವ ಎಚ್ಚರಿಕೆಯನ್ನು ನೀಡಿದೆ. ಫೆಬ್ರವರಿ 26 ಮತ್ತು 27 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ತಾಪಮಾನದಲ್ಲಿ ತೀವ್ರ ಏರಿಕೆಯಾಗಿದೆ. ಫೆಬ್ರವರಿಯಾಗಿದ್ದರೂ, ಸಾಮಾನ್ಯವಾಗಿ ತಂಪಾದ ಹವಾಮಾನದೊಂದಿಗೆ ಸಂಬಂಧಿಸಿದ ಒಂದು ತಿಂಗಳು,…

Read More

ಬಸ್- ಕಾರು ನಡುವೆ ಭೀಕರ ಅಪಘಾತ – ಐವರು ದುರ್ಮರಣ

ತಿರುಚ್ಚಿ : ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನಪ್ಪಿದ ಘಟನೆ ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರು ಪ್ರಯಾಣಿಸುತ್ತಿದ್ದ ಕಾರು ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ್ತಲೈ ಬಳಿ ತಿರುಪುರ ಕಡೆಗೆ ಬರುತ್ತಿದ್ದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್‌ನ ಕೆಳಭಾಗಕ್ಕೆ ನುಗ್ಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಅವಶೇಷಗಳಡಿ ಸಿಲುಕಿ…

Read More

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: 21,413 ಅಂಚೆ ಇಲಾಖೆ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು, 21 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಕೂಡಲೇ ಆನ್ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಾರ್ಚ್‌ 3 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 23 ಕ್ಷೇತ್ರಗಳಲ್ಲಿ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ತುಂಬಲಾಗುತ್ತದೆ. ಅರ್ಜಿ ಸಲ್ಲಿಸಲು https://indiapostgdsonline.gov.in/ ಇಲ್ಲಿ ಕ್ಲಿಕ್‌ ಮಾಡಿ

Read More

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ವೇಳೆ KSRTC ಬಸ್ ಪ್ರಯಾಣ ಉಚಿತ

ಬೆಂಗಳೂರು: SSLC (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ ತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ. ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ….

Read More

ಒಮನ್‌ ದೇಶದ ಬೋಟ್ ಪತ್ತೆ, ಮೂವರು ಮೀನುಗಾರರು ಅರೆಸ್ಟ್

ಉಡುಪಿ: ಮಲ್ಪೆ ಕರಾವಳಿಯಿಂದ ಸುಮಾರು ಎಂಟು ನಾಟಿಕಲ್ ಮೈಲು ದೂರದಲ್ಲಿರುವ ಸೇಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಒಮನ್ ದೇಶದ ಮೀನುಗಾರಿಕೆ ದೋಣಿ ಎಂದು ಗುರುತಿಸಲಾದ ಈ ಬೋಟನ್ನು ಮೊದಲಿಗೆ ಸ್ಥಳೀಯ ಮೀನುಗಾರರು ಗಮನಿಸಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ತಮಿಳುನಾಡಿನ ರಾಮನಾಥಪುರಂನ ಜೇಮ್ಸ್ ಫ್ರಾಂಕ್ಲಿನ್ ಮೋಸೆಸ್ (50) ತಿರುನಲ್ವೇಲಿಯ ರಾಬಿನ್‌ಸ್ಟನ್ (50)…

Read More

ಉಡುಪಿ: 14ನೇ ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ: ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್ ಅವರು ಆಯತಪ್ಪಿ ಕಟ್ಟಡದ ೧೪ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.ಯುವಕನ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Read More