admin

ಭೀಕರ ಅಪಘಾತ: ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಮೇಲಕ್ಕೆ ಹಾರಿಬಿದ್ದು ಸ್ಥಳದಲ್ಲೇ ಸಾವು

ಚಿತ್ರದುರ್ಗ : ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇ ನಲ್ಲಿ ರಸ್ತೆ ದಾಟುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಮಹಿಳೆ 10 ಅಡಿಗೂ ಹೆಚ್ಚು ಎತ್ತರಕ್ಕೆ ಹಾರಿ ಬಿದ್ದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. 30 ಸೆಕೆಂಡುಗಳ ಸಿಸಿಟಿವಿ ಕ್ಲಿಪ್‌ನಲ್ಲಿ ಚಿತ್ರದುರ್ಗದ ಎಕ್ಸ್‌ಪ್ರೆಸ್‌ವೇ ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಆಕೆಗೆ ಢಿಕ್ಕಿಯಾಗಿದ್ದು, ಕಾರು ಢಿಕ್ಕಿಯಾದ ರಭಸಕ್ಕೆ ಮಹಿಳೆ…

Read More

ಜಾಗ್ವಾರ್ ವಿಮಾನಕ್ಕೆ ಮಂಗಳೂರಿನ ತನುಷ್ಕಾ ಪೈಲಟ್

ಮಂಗಳೂರು: ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸ‌ರ್ ತನುಷ್ಕಾ ಸಿಂಗ್ ಅವರಿಗೆ ಈ ಸದಾವಕಾಸ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.ಜಾಗ್ವಾರ್ ಯುದ್ಧ ವಿಮಾನವನ್ನು ಇದುವರೆಗೆ ಮಹಿಳಾ ಪೈಲಟ್‌ಗಳು ಶಾಶ್ವತ ನೆಲೆಯಲ್ಲಿ ಮುನ್ನಡೆಸಿಲ್ಲ. ತನುಷ್ಕಾ ಮಿಲಿಟರಿ ಹಿನ್ನೆಲೆಯ ಕುಟುಂಬದವರು. ಅವರ ತಂದೆ, ಅಜ್ಜ ಎಲ್ಲರೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮೂಲತಃ…

Read More

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಮೂವರು ಮಹಿಳೆಯರ ಜೀವದಹನ

ಧರ್ಮಪುರಿ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕಂಬನಲ್ಲೂರಿನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಇದು ಸ್ಥಳೀಯ ಪಟಾಕಿ ಉದ್ಯಮದಲ್ಲಿನ ಸುರಕ್ಷತಾ ನಿಯಮಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮೃತರೆಲ್ಲರೂ ಹತ್ತಿರದ ಹಳ್ಳಿಯ ನಿವಾಸಿಗಳು. ಸ್ಫೋಟ ಸಂಭವಿಸಿದಾಗ ಅವರು ಚಿನ್ನದುರೈ ಒಡೆತನದ ಪರವಾನಗಿ ಪಡೆದ ಸಂಗ್ರಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೀಕರ ಸ್ಫೋಟದ ತೀವ್ರತೆಗೆ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದರು. ಸ್ಫೋಟದ…

Read More

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ: ಆಕ್ಟಿವಾ ಸವಾರ ಮೃತ್ಯು

ಕಬಕ: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ. ಮೃತರನ್ನು ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ನಿವಾಸಿ ಜನಾರ್ಧನ ಪೂಜಾರಿ (40.) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದಂತಾಗಿದೆ.ಈ ಹಿಂದೆ ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು…

Read More

ಖಾಸಗಿ ಆಸ್ಪತ್ರೆಯ ಎಡವಟ್ಟು: ಸಿಸೇರಿಯನ್ ಬಳಿಕ ಬಾಣಂತಿ ಹೊಟ್ಟೆಯಲ್ಲೇ ಉಳಿದ ಬಟ್ಟೆ- ಪತಿ ಆರೋಪ, ದೂರು

ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ ಬಯಲಾಗಿದ್ದು, ಖಾಸಗಿ ಆಸ್ಪತ್ರೆಯ ವಿರುದ್ಧ ಬಾಣಂತಿಯ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಹೌದು 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ, ಪುತ್ತೂರು ತಾಲೂಕಿನ…

Read More

ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು ಕತ್ತು ಸೀಳಿ ಕೊಲೆ!

ನವದೆಹಲಿ : ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ ಈಕೆ ಫೆಬ್ರವರಿ 18 ರಂದು ತನ್ನ ಪತಿ ಅಶೋಕ್ ಕುಮಾರ್ ಜೊತೆಗೆ ಪ್ರಯಾಗ್ ರಾಜ್ ಗೆ ತೆರಳಿದ್ದರು. ಪ್ರಯಾಗರಾಜ್ ಕಮಿಷನರೇಟ್ ವ್ಯಾಪ್ತಿಯ ಜುನ್ಸಿ ಪ್ರದೇಶದಲ್ಲಿ ಫೆಬ್ರವರಿ 18 ರ ರಾತ್ರಿ ಈ ಬರ್ಬರ ಹತ್ಯೆ ನಡೆದಿತ್ತು. ಆದರೆ, ಘಟನೆ ನಡೆದ 48…

Read More

ಬೈಕಂಪಾಡಿ ಯಲ್ಲಿ ಕಾರು ಅಫಘಾತ: ಕಾರು ಚಾಲಕ ಇಂಜಿನಿಯರ್ ವಿಜಯ ಮಯ್ಯ ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೋಲ್ನಾಡು ಕಿರುಸೇತುವೆ ಬಳಿ ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿಯಾಗಿದ್ದು ಓಮ್ನಿಯಲ್ಲಿದ್ದ ಕಾರು ಚಾಲಕ ಇಂಜಿನಿಯರ್ ವಿಜಯ ಮಯ್ಯ ಹಾಗೂ ಬಂಟ್ವಾಳ ಸಜಿಪ ಮೂಲದ ನಾಲ್ವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಉಡುಪಿ ಜಿಲ್ಲೆಯ ಕಟಪಾಡಿಯಿಂದ ಕಂಬಳ ಮುಗಿಸಿ ವಾಪಸಾಗುತ್ತಿದ್ದ ವೇಳೆ ಮುಲ್ಕಿ ಸಮೀಪದ ಕೋಲ್ನಾಡು ಕಿರುಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ, ಹೆದ್ದಾರಿಯ ಕಬ್ಬಿಣದ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಿಂದ ನಾಲ್ವರಿಗೆ ಸಣ್ಣಪುಟ್ಟ…

Read More

ದೆಹಲಿ ವಿಧಾನಸಭೆ: ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ

ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಸಿಎಂ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಎಎಪಿಯ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ 22 ಶಾಸಕರು ಇಂದು ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಅವರನ್ನು ಆರಿಸಲಾಗಿದೆ. ಫೆ.24ರಿಂದ ದೆಹಲಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದೆ. ಈ 3 ದಿನಗಳ ಅಧಿವೇಶನದಲ್ಲಿ, ಆಡಳಿತರೂಢ ಬಿಜೆಪಿಯು ಹಿಂದಿನ ಎಎಪಿ ಸರ್ಕಾರದ…

Read More

ಕಂದಕಕ್ಕೆ ಉರುಳಿ ಬಿದ್ದ ಬಸ್ ‌- ಚಾಲಕ ಸಾವು, 17 ಯಾತ್ರಿಕರಿಗೆ ಗಾಯ

ಜಮ್ಮು: ಮಾತಾ ವೈಷ್ಣೋದೇವಿ ದೇಗುಲದಿಂದ ಹಿಂತಿರುಗುತ್ತಿದ್ದ ಬಸ್ ಶನಿವಾರ ಸಂಜೆ ಜಮ್ಮು ಬಳಿ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನ್ನಪ್ಪಿದ್ದು, 17 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುಕೆ-07ಪಿಎ-5640 ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಸ್ ದೆಹಲಿಗೆ ತೆರಳುತ್ತಿದ್ದಾಗ ಜಮ್ಮು ಬಸ್ ನಿಲ್ದಾಣದಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಮಂದಾ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುವು ಪಡೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್…

Read More