admin

ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಆಚರಣೆ

ಮಂಗಳೂರು : ಶಕ್ತಿನಗರದ ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಶನಿವಾರ ನಡೆಯಿತು. ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ರಂಗಕರ್ಮಿ ಜಿ.ಎಸ್.ಆಚಾರ್ ರವರಿಗೆ ಹಾಸ್ಯ ಚಕ್ರವರ್ತಿ ಬಿರುದಾಂಕಿತ ದಿ| ಮಾಧವ ಕೆ. ಶಕ್ತಿನಗರ ಸ್ಮಾರಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಾಲಾ ನಾಯಕತ್ವ ಸಮಾವೇಶಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ದಾಕ್ಷಾಯಿನಿ ವೀರೇಶ್, ಪದವಿಪೂರ್ವ ಕಾಲೇಜಿಗೆ…

Read More

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ- ಸವಾರ ಮೃತ್ಯು,ಸಹಸವಾರ ಗಂಭೀರ

ಸಾಲಿಗ್ರಾಮ: ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಸಮೀಪ ಚೇಂಪಿಯ ವಿಶ್ವಕರ್ಮ ಸಭಾ ಭವನ ಬಳಿ ಸಂಭವಿಸಿದೆ. ಮೃತಪಟ್ಟ ಸ್ಕೂಟರ್ ಸವಾರ ಗುಂಡ್ಮಿ ಅನಂತ ಹೆಗ್ಡೆ(40) ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಸಹಸವಾರ ಚೇಂಪಿ ದೇವಸ್ಥಾನದ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ್ ನಾಯಕ್ ಅವರನ್ನು ಬ್ರಹ್ಮಾವರ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಗೂಡ್ಸ್…

Read More

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

ನವದೆಹಲಿ: ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರೋಧದ ನಡುವೆ ಹೊಸದಾಗಿ ನೇಮಕಗೊಂಡ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಕುಮಾರ್ ಅವರನ್ನು ನೇಮಕ ಮಾಡಿದೆ. ಈ ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸದಸ್ಯರಾಗಿದ್ದಾರೆ. ಹೊಸ ಕಾನೂನಿನ ಅಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದು, ಅವರ ಅಧಿಕಾರಾವಧಿ 2029 ರ ಜನವರಿ 26…

Read More

ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ- ಮೂವರು ಉಪಪ್ರಾಂಶುಪಾಲಕರು ಅರೆಸ್ಟ್​

ಬೆಂಗಳೂರು: ಕಾನೂನು ಪದವಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಲಾರದ ಬಸವ ಶ್ರೀ ಕಾನೂನು ವಿಶ್ವವಿದ್ಯಾಲಯದ ಉಪಪ್ರಾಂಶುಪಾಲ ಡಾ. ನಾಗರಾಜ್, ವರೂಣ್ ಮತ್ತು ಜಗದೀಶ್ ಬಂಧಿತ ಆರೋಪಿಗಳು. ಜನವರಿ 22ರಂದು ನಡೆಯಬೇಕಿದ್ದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಸೋರಿಕೆಯಾದ ಪ್ರಶ್ನೆಪತ್ರಿಕೆ ಹಲವಾರು ಜನರ ವಾಟ್ಸಾಪ್​ ಮತ್ತು ಟೆಲಿಗ್ರಾಂನಲ್ಲಿ ಹರಿದಾಡಿತ್ತು. ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡು ತನಿಖೆ…

Read More

ಶಾಲಾ ರಂಗೋತ್ಸವದಲ್ಲಿ ಭೂತಾರಾಧನೆ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದೈವರಾಧನೆ ಎನ್ನುವುದು ಸಾವಿರಾರು ವರ್ಷಗಳಿಂದಲೂ ತುಳುನಾಡಿನ ಶ್ರದ್ಧಾ ಭಕ್ತಿಯ ಇತಿಹಾಸ ಹೊಂದಿರುವ ಧಾರ್ಮಿಕ ಆಚರಣೆಯಾಗಿದೆ ಹೊರತು ಅದು ಯಾವುದೇ ಮನೋರಂಜನೆಯ ಕಲೆಯಲ್ಲ. ಮಕ್ಕಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು…

Read More

ಬೆಳ್ತಂಗಡಿ: ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಬೆಳ್ತಂಗಡಿ: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು ಮಕ್ಕಳಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಕೂಗು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಜ್ಜೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಇನ್ನೂ…

Read More

ಮಂಗಳೂರು: ಮಾ.7-9ರವರೆಗೆ ಸಸಿಹಿತ್ಲು ಬೀಚ್‌ನಲ್ಲಿ ಇಂಡಿಯಾ ಪ್ಯಾಡಲ್ ಫೆಸ್ಟಿವಲ್

ಮಂಗಳೂರು: ದೇಶದ ಏಕೈಕ ಅಂತರರಾಷ್ಟ್ರೀಯ ಸ್ಟ್ಯಾಂಡ್-ಅಪ್ ಪ್ಯಾಡಲ್ ಕಾರ್ಯಕ್ರಮವಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್, ಮಾರ್ಚ್ 7 ರಿಂದ 9 ರವರೆಗೆ ನಗರದ ಸಸಿಹಿತ್ಲು ಬೀಚ್‌ನಲ್ಲಿ ನಡೆಯಲಿದೆ. ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಈ ಉತ್ಸವದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟುಗಳು, ಪ್ರಾದೇಶಿಕ ಸ್ಪರ್ಧಿಗಳು ಮತ್ತು ಜಲ ಕ್ರೀಡಾ ಉತ್ಸಾಹಿಗಳು ಭಾಗವಹಿಸಲಿದ್ದಾರೆ. ಪ್ಯಾಡಲ್ ಫೆಸ್ಟಿವಲ್ 2025 ಗಾಗಿ ನೋಂದಣಿಗಳು ಆರಂಭವಾಗಿದ್ದು, ವಿವಿಧ ವಿಭಾಗಗಳಲ್ಲಿ ಭಾಗವಹಿಸುವವರನ್ನು ಆಹ್ವಾನಿಸಲಾಗಿದೆ. ನೋಂದಣಿ ಮತ್ತು ಈವೆಂಟ್ ವಿವರಗಳಿಗಾಗಿ https://indiapaddlefestival.com/ipf2025-registration/ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Read More

ಪ್ರಧಾನಿ ಮೋದಿ-ಎಲೋನ್ ಮಸ್ಕ್ ಭೇಟಿ: ಭಾರತದಲ್ಲಿ ನೇಮಕಾತಿ ಪ್ರಾರಂಭಿಸಿದ ಟೆಸ್ಲಾ

ನವದೆಹಲಿ:ಪ್ರಧಾನಿ ಮೋದಿ ಮತ್ತು ಎಲೋನ್ ಮಸ್ಕ್ ನಡುವಿನ ಸಭೆಯ ನಂತರ ಟೆಸ್ಲಾ ಇಂಕ್ ಭಾರತದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕಂಪನಿಯು ಇತ್ತೀಚೆಗೆ ತನ್ನ ಲಿಂಕ್ಡ್ಇನ್ ಪುಟದಲ್ಲಿ ಅಪ್ಲೋಡ್ ಮಾಡಿದ ಉದ್ಯೋಗ ಪೋಸ್ಟಿಂಗ್ಗಳ ಪ್ರಕಾರ, ಮಸ್ಕ್ ಒಡೆತನದ ಕಂಪನಿಯು ಗ್ರಾಹಕ-ಮುಖ ಮತ್ತು ಬ್ಯಾಕ್-ಎಂಡ್ ಸ್ಥಾನಗಳು ಸೇರಿದಂತೆ 13 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹುಡುಕುತ್ತಿದೆ ಎಂದು ಘೋಷಿಸಿದೆ. ಸರ್ವೀಸ್ ಟೆಕ್ನಿಷಿಯನ್ ಮತ್ತು ವಿವಿಧ ಸಲಹಾ ಹುದ್ದೆಗಳು ಸೇರಿದಂತೆ ಐದು ಹುದ್ದೆಗಳು ಮುಂಬೈ ಮತ್ತು ದೆಹಲಿ ಎರಡರಲ್ಲೂ ಲಭ್ಯವಿದ್ದರೆ, ಉಳಿದ ಹುದ್ದೆಗಳು –…

Read More

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ- ಓರ್ವ ಸವಾರ ಮೃತ್ಯು

ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ….

Read More

ಬೆಳ್ತಂಗಡಿ: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ..!

ಬೆಳ್ತಂಗಡಿ: ಶಕ್ತಿನಗರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರಿಗೆ ದನದ ಮಾಂಸ ಕತ್ತರಿಸುತ್ತಿದ್ದ ಇಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ದಾಳಿ ವೇಳೆ ದನದ ಮಾಂಸ ಮತ್ತು ಪುಟ್ಟ ಕರು ಪತ್ತೆಯಾಗಿದ್ದು, ಪೊಲೀಸರ ಕಣ್ಣು ತಪ್ಪಿಸಲು ರಾತ್ರಿಯ ಬದಲು ಹಗಲಿನಲ್ಲಿ ಕಾರ್ಯಾಚರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ ಅನ್ವ‌ರ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ವಿಷಯ ತಿಳಿದು ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು

Read More