ಕಾಂಗ್ರೆಸ್‌ನ ನಲಪಾಡ್‌ಗೆ ಬಿಟ್‌ಕಾಯಿನ್ ಸಂಕಷ್ಟ: ಬಂಧನ ಭೀತಿ
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಕೇಸ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ. ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಎಸ್‌ಐಟಿ ನೋಟಿಸ್ ನೀಡಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದರಿಂದಾಗಿ ನಲಪಾಡ್ ಅವರಿಗೆ ಬಂಧನ ಭೀತಿ ಶುರುವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿ…

